ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಕೊರೊನಾ ಸೋಂಕು

|
Google Oneindia Kannada News

ನವದೆಹಲಿ, ಏಪ್ರಿಲ್ 20: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಕೊರೊನಾ ಸೋಂಕು ತಗುಲಿದೆ.

ಈ ಕುರಿತು ಖುದ್ದಾಗಿ ಅವರು ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 'ನನಗೆ ಸಣ್ಣ ಪ್ರಮಾಣದ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು. ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.

Congress Leader Rahul Gndhi Tests Positive For Covid 19

ನನ್ನ ಸಂಪರ್ಕಕ್ಕೆ ಬಂದವರು ಪ್ರತಿಯೊಬ್ಬರೂ ಕೊರೊನಾ ಪರೀಕ್ಷೆ ಮಾಡಿಸಿ, ಕೊರೊನಾ ನಿಯಮಗಳನ್ನು ಪಾಲಿಸಿ ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗೆಷ್ಟೇ ಚುನಾವಣಾ ಆಯೋಗವು 5 ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿತ್ತು. ಅದರಂತೆ ರಾಹುಲ್ ಗಾಂಧಿ ಕೇರಳ, ಅಸ್ಸಾಂ, ಪುದುಚೇರಿ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳದಲ್ಲಿ ಸಾಲು ಸಾಲು ಚುನಾವಣಾ ಪ್ರಚಾರವನ್ನು ನಡೆಸಿದ್ದರು.

ಕಳೆದ ಒಂದು ತಿಂಗಳಿಂದ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ 259170 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ವಲಸೆ ಕಾರ್ಮಿಕರ ಖಾತೆಗೆ ಹಣ ಹಾಕಿ: ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹವಲಸೆ ಕಾರ್ಮಿಕರ ಖಾತೆಗೆ ಹಣ ಹಾಕಿ: ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ

ದೇಶದಲ್ಲಿ ಒಂದೇ ದಿನ 1,761 ಮಂದಿ ಪ್ರಾಣ ಬಿಟ್ಟಿದ್ದು, 1,54,761 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ರಾಹುಲ್ ಗಾಂಧಿ ಭಾವ ರಾಬರ್ಟ್ ವಾದ್ರಾಗೂ ಇತ್ತೀಚೆಗೆ ಕೊರೊನಾ ಸೋಂಕು ತಗುಲಿತ್ತು, ಇನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಇತ್ತೀಚೆಗಷ್ಟೇ ಕೊರೊನಾ ಸೋಂಕು ತಗುಲಿತ್ತು. ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೂಡ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಪಡೆಯುತ್ತಿದ್ದಾರೆ, ಆರೋಗ್ಯ ಸ್ಥಿರವಾಗಿದೆ.

English summary
Congress leader Rahul Gandhi tests positive for COVID19 with mild symptoms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X