ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಗೆ ನೈತಕತೆಯ ಪಾಠ ಮಾಡಿದ ಮಲ್ಲಿಕಾರ್ಜುನ ಖರ್ಗೆ

|
Google Oneindia Kannada News

ದೆಹಲಿ, ಡಿಸೆಂಬರ್.10: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಏನಾಗುತ್ತೋ ಏನೋ ಎಂದು ಆತಂಕದಲ್ಲಿದ್ದ ಸರ್ಕಾರವೇನೋ ಸೇಫ್ ಆಗಿದೆ. ಆದರೆ, ಕಾಂಗ್ರೆಸ್-ಜೆಡಿಎಸ್ ಕಥೆ ಮಾತ್ರ ತೀರಾ ಶೋಚನೀಯ.

15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಿಂದೆಂದೂ ಕಾಣದ ರೀತಿಯಲ್ಲಿ ಸೋಲು ಅನುಭವಿಸಿದೆ. ಕೇವಲ ಎರಡು ಸ್ಥಾನಗಳಲ್ಲಿ ಗೆಲುವು ದಾಖಲಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ.

ಸಿದ್ದರಾಮಯ್ಯ ಮತ್ತು ಗುಂಡೂರಾವ್ ರಾಜೀನಾಮೆ ನೀಡಲು ಇವರೇ ಕಾರಣಸಿದ್ದರಾಮಯ್ಯ ಮತ್ತು ಗುಂಡೂರಾವ್ ರಾಜೀನಾಮೆ ನೀಡಲು ಇವರೇ ಕಾರಣ

ಇದರ ನಡುವೆ ದೆಹಲಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಗೆದ್ದೆವು ಎಂದು ಬೀಗಿದರೆ ಸಾಲದು. ನಿಮ್ಮ ರಾಜಕೀಯ ನಡೆ ಹೇಗಿತ್ತು ಎಂಬುದನ್ನೇ ನೀವೇ ಒಮ್ಮೆ ತಿರುಗಿ ನೋಡಿಕೊಳ್ಳಿ ಎಂದು ಕಿಡಿ ಕಾರಿದ್ದಾರೆ.

Congress Leader Teach About Morality To State BJP

ಬಿಜೆಪಿಗೆ ನೈತಿಕತೆಯ ಪಾಠ

ಉಪ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಿಜೆಪಿಗೆ ಮತ ನೀಡಿದ್ದಾರೆ. ಅದರಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ. ಅದೆಲ್ಲ ಒಂದು ಕಡೆ ಇರಲಿ. ಆದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಕರೆದುಕೊಂಡು ಹೋಗಿ, ಅವರ ರಾಜೀನಾಮೆಯನ್ನು ಕೊಡಿಸಿದ್ದಾರೆ. ಅವರ ರಾಜೀನಾಮೆ ಕೊಡಿಸಿ ಚುನಾವಣೆ ಮಾಡಿದ್ದು ಯಾವ ನೈತಿಕತೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

English summary
Congress Leader Mallikarjun Kharge Teach About Morality To State BJP Leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X