RSS ಆಮಂತ್ರಣಕ್ಕೆ 'ಒಲ್ಲೆ' ಎನ್ನಿ: ರಾಹುಲ್ ಗೆ ನಾಯಕರ ಸಲಹೆ

ನವದೆಹಲಿ, ಆಗಸ್ಟ್ 30: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಮಂತ್ರಿಸಲಾಗುತ್ತಿದೆ ಎಂದು ಸುದ್ದಿಯಾಗಿತ್ತು. ಆದರೆ ಈ ಸುದ್ದಿಯನ್ನು ಆರೆಸ್ಸೆಸ್ ಮತ್ತು ಕಾಂಗ್ರೆಸ್ ಎರಡೂ ತಳ್ಳಿಹಾಕಿದ್ದವು.

ಆದರೆ ಅಕಸ್ಮಾತ್ RSS ಏನಾದರೂ ರಾಹುಲ್ ಗಾಂಧಿ ಅವರನ್ನು ಕಾರ್ಯಕ್ರಮಕ್ಕೆ ಆಮಂತ್ರಿಸಿದ್ದೇ ಆದಲ್ಲಿ, ಆ ಆಮಂತ್ರಣವನ್ನು ಒಪ್ಪಿಕೊಳ್ಳದೆ 'ಒಲ್ಲೆ' ಎನ್ನಿ ಎಂದು ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿಗೆ ಸಲಹೆ ನೀಡಿದ್ದಾರೆ.

ಸೆಪ್ಟೆಂಬರ್ ನಲ್ಲಿ ದೆಹಲಿಯಲ್ಲಿ ನಡೆಯಲಿರುವ ಆರೆಸ್ಸೆಸ್ ಕಾರ್ಯಕ್ರಮವೊಂದಕ್ಕೆ ರಾಹುಲ್ ಗಾಂಧಿ ಸೇರಿದಂತೆ ಕೆಲವು ಕಾಂಗ್ರೆಸ್ ಮುಖಂಡರನ್ನೂ ಮತ್ತು ಸಿಪಿಐಎಂ ಮುಖಂಡ ಸೀತಾರಾಮ್ ಯೆಚೂರಿ ಅವರನ್ನೂ ಆರೆಸ್ಸೆಸ್ ಆಮಂತ್ರಿಸಿದೆ ಎಂದು ಸುದ್ದಿಯಾಗಿತ್ತು. ಈ ಸುದ್ದಿಯನ್ನು ಕಾಂಗ್ರೆಸ್ ಮತ್ತು ಆರೆಸ್ಸೆಸ್ ತಳ್ಳಿಹಾಕಿದ್ದರೂ, ಕಾಂಗ್ರೆಸ್ ಕೋರ್ ಗ್ರೂಪ್ ಸಭೆಯಲ್ಲಿ, ಆರೆಸ್ಸೆಸ್ ಆಮಂತ್ರಿಸಿದ್ದೇ ಆದರೆ ಆ ಕಾರ್ಯಕ್ರಮಕ್ಕೆ ಹೋಗಬೇಡಿ ಎಂದು ರಾಹುಲ್ ಗಾಂಧಿ ಅವರಿಗೆ ನಾಯಕರು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Congress leaders advise Rahul Gandhi to not accept RSS program invitation: Sources

The India of the future" ಎಂಬ ವಿಷಯದ ಕುರಿತುಆರೆಸ್ಸೆಸ್ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ.

ಕಳೆದ ಜೂನ್ ನಲ್ಲಿ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಕ್ರಮವೊಂದರಲ್ಲಿ ಮಾಜಿ ರಾಷ್ತ್ರಪತಿ ಪ್ರಣಬ್ ಮುಖರ್ಜಿ ಭಾಗವಹಿಸಿದ್ದರು. ಅವರು ನೀಡಿದ ಭಾಷಣ ದೇಶಾದ್ಯಂತ ಚರ್ಚೆಗೊಳಪಟ್ಟಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+