ತಿಹಾರ್ ಜೈಲಿನಿಂದ ಬಿಡುಗಡೆಯಾದ ಕಾಂಗ್ರೆಸ್‌ನ ಇಬ್ಬರು ನಾಯಕರ ಭೇಟಿ

ನವದೆಹಲಿ, ಡಿಸೆಂಬರ್ 5: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬುಧವಾರ ತಿಹಾರ್ ಜೈಲಿನಿಂದ ಬಿಡುಗಡೆಯಾದ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮತ್ತು ಡಿ.ಕೆ. ಶಿವಕುಮಾರ್ ಗುರುವಾರ ಭೇಟಿಯಾದರು.

ಕಾಂಗ್ರೆಸ್‌ನ ಇಬ್ಬರೂ ನಾಯಕರು ನವದೆಹಲಿಯಲ್ಲಿ ಭೇಟಿಯಾಗಿ ಸುಮಾರು 45 ದಿನಗಳ ಕಾಲ ಮಾತುಕತೆ ನಡೆಸಿದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಹಾಜರಿದ್ದರು.

ಇಬ್ಬರೂ ನಾಯಕರು ಪ್ರತ್ಯೇಕ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳ ವಿಚಾರಣೆ ಎದುರಿಸಿ ತಿಹಾರ್ ಜೈಲಿನಲ್ಲಿ ದಿನ ಕಳೆದಿದ್ದರು. ಪಿ. ಚಿದಂಬರಂ 106 ದಿನಗಳ ಕಾಲ ಜೈಲಿನಲ್ಲಿದ್ದರೆ, ಡಿ.ಕೆ. ಶಿವಕುಮಾರ್ 50 ದಿನಗಳವರೆಗೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಿ ಸೆರೆವಾಸ ಅನುಭವಿಸಿದ್ದರು.

Congress Leaders DK Shivakumar And P Chidambaram Met At Delhi

ದೆಹಲಿ ಫ್ಲ್ಯಾಟ್‌ನಲ್ಲಿ ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದ ಡಿ.ಕೆ. ಶಿವಕುಮಾರ್, ಅ.23ರಂದು ಬಿಡುಗಡೆಯಾಗಿದ್ದರು. ದೆಹಲಿ ಹೈಕೋರ್ಟ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತ್ತು.

ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆ.21ರಂದು ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ದೆಹಲಿಯ ಅವರ ನಿವಾಸದಿಂದ ವಶಕ್ಕೆ ಪಡೆದುಕೊಂಡಿದ್ದರು. ಅನಾರೋಗ್ಯದ ಕಾರಣ ಜಾಮೀನು ನೀಡಬೇಕೆಂಬ ಅವರ ಅರ್ಜಿಗಳು ತಿರಸ್ಕೃತಗೊಂಡಿದ್ದವು. ಕೊನೆಗೂ ಬುಧವಾರ ಸುಪ್ರೀಂಕೋರ್ಟ್ ಶುಕ್ರವಾರ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಚಿದಂಬರಂ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ತಮ್ಮ ಬಂಧನವು ರಾಜಕೀಯ ದ್ವೇಷದಿಂದ ನಡೆದಿದೆ ಎಂದು ಆರೋಪಿಸಿದ್ದರು. ಈಗ ಕಾಂಗ್ರೆಸ್‌ನ ಇಬ್ಬರೂ ನಾಯಕರು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+