• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ಕಾರ್ಯಕಾರಿ ಸಭೆ: ಹೊಸ ಅಧ್ಯಕ್ಷರ ನೇಮಕ ಸಾಧ್ಯತೆ

|

ನವದಹೆಲಿ, ಆಗಸ್ಟ್ 10: ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡುವುದು ಸಭೆಯ ಮುಖ್ಯ ಅಜೆಂಡಾ ಆಗಿದೆ.

ಲೋಕಸಭಾ ಚುನಾವಣೆಯಲ್ಲಿ ಸೋಲಿನ ನಂತರ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಂದಿನಿಂದ, ಕಾಂಗ್ರೆಸ್ ತನ್ನ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಕಸರತ್ತಿನಲ್ಲಿ ತೊಡಗಿದೆ. ಪಕ್ಷದ ಹೊಸ ಅಧ್ಯಕ್ಷರ ರೇಸ್ ನಲ್ಲಿ ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ್ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಮುಂಚೂಣಿಯಲ್ಲಿದ್ದಾರೆ ಎನ್ನಲಾಗುತ್ತಿದೆ.

ಮುಕುಲ್ ವಾಸ್ನಿಕ್ ಹೆಗಲಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ? ನಾಳೆ ನಿರ್ಧಾರ

ಸಾಕಷ್ಟು ಹೆಸರುಗಳು ಕೇಳಿ ಬಂದಿದ್ದರೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನೇ ಅಂತಿಮವಾಗಿ ಆಯ್ಕೆ ಮಾಡಿದರೂ ಆಶ್ಚರ್ಯವೇನಿಲ್ಲ.

ಸಿಡಬ್ಲ್ಯುಸಿಯಲ್ಲಿ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷರನ್ನು ಆಯ್ಕೆ ಮಾಡಬಹುದು. ಕಾಂಗ್ರೆಸ್ ಮುಖಂಡ ಮತ್ತು ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮಾತನಾಡಿ, ಕಾಂಗ್ರೆಸ್ ನಾಯಕರು ಕೂಡ ಅಧ್ಯಕ್ಷ ಹುದ್ದೆಯ ಬಗ್ಗೆ ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬಯಸುತ್ತಾರೆ. ಶನಿವಾರ ಈ ವಿಷಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪಕ್ಷದ ಹೊಸ ಅಧ್ಯಕ್ಷರಲ್ಲಿ ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ್ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬರುತ್ತಿವೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ಹಿರಿಯ ನಾಯಕರಿಗೆ ನೀಡಬೇಕೇ? ಅಥವಾ ಕಿರಿಯರಿಗೆ ಪಟ್ಟಾಭಿಷೇಕ ಮಾಡುವುದೇ ಎಂಬ ಬಗ್ಗೆಯೂ ಇಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಮತ್ತೊಂದೆಡೆ, ಪಕ್ಷದ ಹಿರಿಯ ನಾಯಕ ಮತ್ತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಕ್ಷದ ಅಧ್ಯಕ್ಷರ ಜವಾಬ್ದಾರಿಯನ್ನು ಯುವ ನಾಯಕನಿಗೆ ವಹಿಸಿಕೊಡುವುದಾಗಿ ಈ ಹಿಂದೆ ಹೇಳಿದ್ದರು.

ಆದರೆ, ನಂತರ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವಂತೆ ಪ್ರತಿಪಾದಿಸಿದರು. ಇನ್ನೂ ಅನೇಕ ಕಾಂಗ್ರೆಸ್ ಮುಖಂಡರು ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕಾ ಅವರ ಹೆಸರನ್ನು ಪ್ರತಿಪಾದಿಸಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Congress May Picks New Chief Today, The Congress Working Committee (CWC) is likely to select its new interim party president, in a meeting scheduled for 11 am on Saturday at All India Congress Committee’s office in New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more