ದೆಹಲಿಯಲ್ಲಿ ಸೋನಿಯಾ ಗಾಂಧಿ-ಸೌಮ್ಯಾ ರೆಡ್ಡಿ ಭೇಟಿ
ನವದೆಹಲಿ, ಜುಲೈ 08: ಜಯನಗರ ಶಾಸಕಿ, ಕಾಂಗ್ರೆಸ್ ನ ಅತೃಪ್ತ ನಾಯಕರಲ್ಲೊಬ್ಬರಾಗಿದ್ದ ಸೌಮ್ಯಾ ರೆಡ್ಡಿ ಅವರು ನವದೆಹಲಿಯಲ್ಲಿ ಸೋಮವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು.
ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿರುವ ಬಗ್ಗೆ ಮತ್ತು ತಮ್ಮ ತಂದೆ ಶಾಸಕ ರಾಮಲಿಂಗಾ ರೆಡ್ಡಿ ಅವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿಯ ಬಗ್ಗೆ ಬೇಸರ ಹೊಂದಿರುವ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ರಾಜೀನಾಮೆ ನೀಡಿದ್ದು ಹಳೆಯ ಸುದ್ದಿ.
ಆದರೆ ಅವರ ಮನವೊಲಿಕೆಗೆ ಮುಂದಾಗಿರುವ ಕಾಂಗ್ರೆಸ್ ನಾಯಕರು, ಅವರಿಗೆ ಸಚಿವ ಸ್ಥಾನದ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಮುಖಂಡೆ ಸುಶ್ಮಿತಾ ದೇವ್ ಅವರು ಸೌಮ್ಯಾ ರೆಡ್ಡಿ ಅವರನ್ನು ಸೋನಿಯಾ ಗಾಂಧಿ ಅವರ ಬಳಿ ಕರೆದೊಯ್ದಿದ್ದರು. ಅವರೊಂದಿಗೆ ಕೆಲ ಕಾಲ ಚರ್ಚೆ ನಡೆಸಿದ ಸೋನಿಯಾ ಗಾಂಧಿ, ನಾವು ನಿಮ್ಮ ನಿರೀಕ್ಷೆಗಳನ್ನು ಈಡೇರಿಸುತ್ತೇವೆ. ದುಡುಕಬೇಡಿ. ಜೊತೆಗೆ ತಂದೆ ರಾಮಲಿಂಗಾ ರೆಡ್ಡಿ ಅವರಿಗೂ ಪಕ್ಷಕ್ಕೆ ರಾಜೀನಾಮೆ ನೀಡದಂತೆ ಮನವೊಲಿಸಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.












Click it and Unblock the Notifications