ಕೇಂದ್ರದ ಮಾಜಿ ಸಚಿವ ಮನೀಶ್ ತಿವಾರಿಯವರಿಗೆ ಕೊರೊನಾವೈರಸ್
ನವದೆಹಲಿ, ನವೆಂಬರ್.16: ಕಾಂಗ್ರೆಸ್ಸಿನ ಲೋಕಸಭಾ ಸದಸ್ಯ ಮನೀಷ್ ತಿವಾರಿಯವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ ಶ್ರೀಆನಂದ್ ಪುರ್ ಸಾಹಿಬ್ ಲೋಕಸಭಾ ಕ್ಷೇತ್ರದ ಸಂಸದ ಮನೀಶ್ ತಿವಾರಿ ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
Coronavirus in India Live Updates: Live: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,548 ಪ್ರಕರಣ ಪತ್ತೆ
"ಇವತ್ತು ಮಧ್ಯಾಹ್ನದ ಸಂದರ್ಭದಲ್ಲಿ ನನಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ ರಾತ್ರಿ 2 ಗಂಟೆ ಸುಮಾರಿಗೆ ಅಲ್ಪಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಬೆಳಗ್ಗೆ ಸ್ವಯಂಪ್ರೇರಿತನಾಗಿ ಕೊರೊನಾವೈರಸ್ ತಪಾಸಣೆ ಮಾಡಿಸಿಕೊಂಡಾಗ ಸೋಂಕು ಇರುವುದು ಪತ್ತೆಯಾಗಿದೆ. ಎರಡು ಸಾಮಾನ್ಯ ಪರೀಕ್ಷೆಗಳಲ್ಲಿ ಕೊವಿಡ್-19 ಸೋಂಕಿನ ಬಗ್ಗೆ ಗೊತ್ತಾಗಿದ್ದು, ಯಾವುದೇ ಬೇರೆ ಲಕ್ಷಣಗಳು ಕಾಣಿಸಿಕೊಂಡಿಲ್ಲ" ಎಂದು ಸಂಸದ ಮನೀಶ್ ತಿವಾರಿ ಟ್ವೀಟ್ ಮಾಡಿದ್ದಾರೆ.
I have tested positive for COVID -19 today afternoon. I got up with mild fever around 2 AM last night. Got myself tested first thing in the morning.Two parallel Tests. No other symptoms so far.All those who have been in contact with me over the past few days are advised caution.
— Manish Tewari (@ManishTewari) November 16, 2020
"ಇನ್ನು, ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲ ಕಾರ್ಯಕರ್ತರು ಮತ್ತು ಸಂಪರ್ಕಿತರು ಮುನ್ನೆಚ್ಚರಿಕೆ ಕ್ರಮವಾಗಿ ಒಮ್ಮೆ ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಿ" ಎಂದು ಮನೀಶ್ ತಿವಾರಿ ಮನವಿ ಮಾಡಿಕೊಂಡಿದ್ದಾರೆ.

ರಾಜಕೀಯ ನಾಯಕರ ಬೆನ್ನು ಬಿದ್ದ ಕೊವಿಡ್-19:
ಕಳೆದ ಒಂದು ವಾರದಲ್ಲಿ ಹಲವು ರಾಜಕೀಯ ಮುಖಂಡರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಕೂಡ ಕೊವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು.












Click it and Unblock the Notifications