ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸದ ಶಶಿ ತರೂರ್‌ಗೆ ಕೊರೊನಾ ಸೋಂಕು: ದೆಹಲಿ ಆಸ್ಪತ್ರೆಗೆ ದಾಖಲು

|
Google Oneindia Kannada News

ನವದೆಹಲಿ, ಏಪ್ರಿಲ್ 26: ಕಾಂಗ್ರೆಸ್ ಸಂಸದ ಶಶಿ ತರೂರ್‌ಗ್ ಕೊರೊನಾ ಸೋಂಕು ತಗುಲಿದ್ದು, ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

65 ವರ್ಷದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಏಪ್ರಿಲ್ 21 ರಂದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಅಂದಿನಿಂದ ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದರು.

ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಭಾನುವಾರ ರಾಷ್ಟ್ರ ರಾಜಧಾನಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಮಿತ್ರಾ ಮಹಾಜನ್ ಕ್ಷಮೆ ಕೇಳಿದ ಶಶಿ ತರೂರ್ ಸುಮಿತ್ರಾ ಮಹಾಜನ್ ಕ್ಷಮೆ ಕೇಳಿದ ಶಶಿ ತರೂರ್

ಶಶಿ ತರೂರ್ ಅವರು ಇಂದು ದೆಹಲಿಯ ಸರಿತಾ ವಿಹಾರ್‌ನಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Congress MP Shashi Tharoor In Hospital Days After Testing Positive For Covid-19

ಭಾರತದಲ್ಲಿ ಭಾನುವಾರ 3,49,691 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 2,767 ಜನರು ಸಾವನ್ನಪ್ಪಿದ್ದು, 2,17,113 ಜನರು ಡಿಸ್ಚಾರ್ಜ್ ಆಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಭಾರತದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,69,60,172ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 26,82,751.

ದೇಶದಲ್ಲಿ ಇದುವರೆಗೂ 1,40,85,110 ಜನರು ಗುಣಮುಖಗೊಂಡಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 1,92,311. ಇದುವರೆಗೂ 14,09,16,417 ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ.

English summary
Senior Congress leader and MP Shashi Tharoor was admitted to Apollo Hospital in Sarita Vihar on Sunday, a week after he tested positive for coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X