ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಗಾಸಸ್ ಹಗರಣ: ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ ಕಾಂಗ್ರೆಸ್

|
Google Oneindia Kannada News

ನವದೆಹಲಿ, ಜುಲೈ 20: ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಗೆ ಸಂಬಂಧಿಸಿದಂತೆ ಬುಧವಾರ ದೇಶದ ಪ್ರತಿಯೊಂದು ರಾಜ್ಯಗಳಲ್ಲಿ ಸುದ್ದಿಗೋಷ್ಠಿ ನಡೆಸುವುದಕ್ಕೆ ಕಾಂಗ್ರೆಸ್ ನಿರ್ಧರಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ಜುಲೈ 22ರಂದು ಕಾಂಗ್ರೆಸ್ ಪಕ್ಷದ ರಾಜ್ಯ ಘಟಕಗಳು ರಾಜಭವನ್ ಚಲೋ ನಡೆಸಲಿವೆ. ಪ್ರತಿಭಟನಾ ಮೆರವಣಿಗೆ ಮೂಲಕ ರಾಜಭವನಕ್ಕೆ ತೆರಳಿ ದೂರು ಸಲ್ಲಿಸುವದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತೀರ್ಮಾನಿಸಿದೆ.

ಪೆಗಾಸಸ್‌ ಬೇಹುಗಾರಿಕೆ: ಮೋದಿ ವಿರುದ್ದ ತನಿಖೆ, ಶಾ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹಪೆಗಾಸಸ್‌ ಬೇಹುಗಾರಿಕೆ: ಮೋದಿ ವಿರುದ್ದ ತನಿಖೆ, ಶಾ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ

ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಭಾರತದಲ್ಲಿ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ತೀವ್ರ ಚರ್ಚೆಯನ್ನು ಹುಟ್ಟು ಹಾಕಿದೆ. ದೇಶದ ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ ಎಂದ ಆರೋಪವಿದೆ.

Congress Party Decide To Hold Press Conference In Every State on Pegasus Project

ಭಾರತದಲ್ಲಿ ಯಾರ ಮೇಲೆ ಪೆಗಾಸಸ್ ಬೇಹುಗಾರಿಕೆ?

ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.

ಪ್ರತಿಪಕ್ಷಗಳ ಆರೋಪಕ್ಕೆ ಅಮಿತ್ ಶಾ ಉತ್ತರ:

ಭಾರತದ ಪ್ರತಿಪಕ್ಷ ನಾಯಕರು, ಪತ್ರಕರ್ತರು, ಸುಪ್ರೀಂಕೋರ್ಟ್ ನ್ಯಾಯಾಧೀಶರು ಸೇರಿದಂತೆ 300ಕ್ಕೂ ಹೆಚ್ಚು ಜನರ ಮೇಲೆ ಕಣ್ಣಿರಿಸಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಿದ್ದಾರೆ. "ಪೆಗಾಸಸ್ ಬೇಹಾಗಾರಿಕೆ ವರದಿಯು ಪ್ರಗತಿಗೆ ಅಡ್ಡಿಪಡಿಸುವ ಉದ್ದೇಶವನ್ನು ಹೊಂದಿದೆ. ಭಾರತದ ಏಳಿಗೆಯನ್ನು ಸಹಿಸಿಕೊಳ್ಳದ ಕೆಲವು ಜಾಗತಿಕ ಸಂಸ್ಥೆಗಳು ಅದಕ್ಕೆ ಅಡ್ಡಿಪಡಿಸುತ್ತಿವೆ. ಅಲ್ಲದೇ ದೇಶದ ಪ್ರಗತಿಯನ್ನು ಅರಗಿಸಿಕೊಳ್ಳದ ಕೆಲವು ರಾಜಕೀಯ ನಾಯಕರು ಈಗ ಅಡ್ಡಪಡಿಸುವಿಕೆ ತಂತ್ರವನ್ನು ಮಾಡುತ್ತಿದ್ದಾರೆ. ಇವುಗಳ ನಡುವಿನ ನಂಟು ಮತ್ತು ಕಾಲಘಟ್ಟವನ್ನು ಭಾರತದ ಪ್ರಜೆಗಳು ಸರಿಯಾಗಿ ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದಾರೆ," ಎಂದು ಸಚಿವ ಅಮಿತ್ ಶಾ ಹೇಳಿದ್ದಾರೆ.

English summary
Congress Party Decide To Hold Press Conference In Every State on Pegasus Project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X