ಗಂಗಾ ರಾಮ್ ಆಸ್ಪತ್ರೆಯಿಂದ AICC ಅಧ್ಯಕ್ಷೆ ಸೋನಿಯಾ ಗಾಂಧಿ ಡಿಸ್ಚಾರ್ಜ್

ನವದೆಹಲಿ, ಆಗಸ್ಟ್.02: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡು ಬಂದಿದೆ. ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಭಾನುವಾರ ಅವರು ಬಿಡುಗಡೆಯಾಗಿದ್ದಾರೆ.

ಕಳೆದ ಜುಲೈ.30ರಂದು ಸಂಜೆ ಏಳು ಗಂಟೆ ಸಮಯದಲ್ಲಿ ರೂಟಿನ್ ಚೆಕ್ ಅಪ್ ಮತ್ತು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಲು ಸರ್ ಗಂಗಾ ರಾಮ್ ಆಸ್ಪತ್ರೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದಾಖಲಾಗಿದ್ದರು.

ಎದೆ ಮತ್ತು ಉಸಿರಾಟದ ತಜ್ಞ ಡಾ.ಅರೂಪ್ ಕುಮಾರ್ ಬಸು ನೇತೃತ್ವದ ವೈದ್ಯರ ತಂಡವು ಸೋನಿಯಾ ಗಾಂಧಿಯವರ ಆರೋಗ್ಯ ತಪಾಸಣೆ ನಡೆಸಿತು. ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಚೇರ್ ಮನ್ ಡಾ.ಡಿ.ಎಸ್.ರಾಣಾ ತಿಳಿಸಿದ್ದಾರೆ.

New Delhi: Congress President Sonia Gandhi Discharge From Sir Ganga Ram Hospital

ಟ್ವೀಟ್ ಮೂಲಕ ಪ್ರಾರ್ಥನೆ ಸಲ್ಲಿಸಿದ ಯುವ ಕಾಂಗ್ರೆಸ್:

ಪ್ರಸ್ತುತ ಗಂಗಾರಂ ಆಸ್ಪತ್ರೆಯಲ್ಲಿ ದಾಖಲಾದ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಜಿ ಅವರ ಶೀಘ್ರ ಚೇತರಿಕೆಗಾಗಿ ನಾವು ಪ್ರಾರ್ಥಿಸುತ್ತೇವೆ. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಮತ್ತೊಮ್ಮೆ ದೇಶವನ್ನು ಮುನ್ನಡೆಸಲು ಮತ್ತು ರಾಷ್ಟ್ರದ ಆಕಾಂಕ್ಷೆಗಳನ್ನು ಜೀವಂತಗೊಳಿಸಲು ನೀವು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಯುವ ಕಾಂಗ್ರೆಸ್ ಸಮಿತಿಯು ಟ್ವೀಟ್ ಮಾಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+