ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ; ವಲಯವಾರು ಪ್ಯಾಕೇಜ್ ಘೋಷಿಸಲು ಸೋನಿಯಾ ಒತ್ತಾಯ

|
Google Oneindia Kannada News

ನವದೆಹಲಿ, ಮಾರ್ಚ್ 21: ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಸಲಹೆ ನೀಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆದ್ಯತಾ ವಲಯಗಳಿಗೆ ನೆರವು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದ್ದಾರೆ.

ಈ ಕುರಿತು ಶನಿವಾರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ಕೊರೊನಾ ಭಯದಿಂದ ಸಣ್ಣ ಕೈಗಾರಿಕೆಗಳು, ಕಾರ್ಮಿಕರು, ಬಡಜನರಿಗೆ ಪ್ರಧಾನಿ ಅವರು ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ, ನೆರವು ನೀಡಬೇಕು. ಇನ್ನೂ ಮುಂತಾದ ವಲಯಗಳಿಗೆ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಭೀತಿ; ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಕೊರೊನಾ ಭೀತಿ; ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

ಕೊರೊನಾ ಸೋಂಕು ಹರಡದಂತೆ ತಡೆಯಲು ಸರ್ಕಾರದ ನಿಯಮಗಳಿಗೆ ನಾವೆಲ್ಲರೂ ಬದ್ಧರಾಗಿರುವುದು ನಮ್ಮ ಕರ್ತವ್ಯ. ಆದರೆ, ಕೊರೊನಾದಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದ್ದು, ಆರ್‌ಬಿಐ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

Congress President Sonia Gandhi Letter To PM Modi Ahead Of Coronavirus Panic

ಹಿರಿಯ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರೂ ಕೂಡ ಮೋದಿ ಅವರಿಗೆ ಪತ್ರ ಬರೆದು, "ಕೊರೊನಾ ಸಂಬಂಧ ಈ ಹಂತದಲ್ಲಿ ಆರ್ಥಿಕ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡುವುದು ಬಹಳ ನಿರ್ಣಾಯಕವಾಗಿದೆ ಎಂದು ಹೇಳಿದ್ದರು.

ಮೋದಿ ಘೋಷಿಸಿದ್ದ 'ಜನತಾ ಕರ್ಫ್ಯೂ' ಮೆಚ್ಚಿದ ವಿಶ್ವ ಆರೋಗ್ಯ ಸಂಸ್ಥೆಮೋದಿ ಘೋಷಿಸಿದ್ದ 'ಜನತಾ ಕರ್ಫ್ಯೂ' ಮೆಚ್ಚಿದ ವಿಶ್ವ ಆರೋಗ್ಯ ಸಂಸ್ಥೆ

ಭಾರತದಲ್ಲಿ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇತ್ತೀಚಿನ ಅಧಿಕೃತ ಅಂಕಿ ಅಂಶಗಳ ಪ್ರಕಾರ, ಇದುವರೆಗೆ 300 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

English summary
Congress President Sonia Gandhi Letter To PM Modi Ahead Of Coronavirus Panic. she demand for sector wise relief package for Coronavirus crisis.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X