ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕಾಂಗ್ರೆಸ್ ಪ್ರತಿಭಟನೆ ರಾಹುಲ್, ಶಶಿ ತರೂರ್ ವಶಕ್ಕೆ

|
Google Oneindia Kannada News

ನವದೆಹಲಿ, ಆ.05: ಬೆಲೆ ಏರಿಕೆ ಮತ್ತು ನಿರುದ್ಯೋಗ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರಾಹುಲ್ ಗಾಂಧಿ, ಶಶಿ ತರೂರ್ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಶುಕ್ರವಾರ ಕಾಂಗ್ರೆಸ್ ನಾಯಕರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಬೆಲೆ ಏರಿಕೆ ವಿರೋಧಿಸಿ ಪಕ್ಷದ ಮುಖಂಡರು ಇಂದು ರಾಷ್ಟ್ರಪತಿ ಹಾಗೂ ಪ್ರಧಾನಿ ಮನೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸುತ್ತಿದ್ದಾರೆ.

ಪ್ರತಿಭಟನೆ ವೇಳೆ ವಿಜಯ್ ಚೌಕ್‌ನಲ್ಲಿ ಮಾತನಾಡಿರುವ ರಾಹುಲ್ ಗಾಂಧಿ "ಹಣದುಬ್ಬರ ಮತ್ತು ಬೆಲೆ ಏರಿಕೆಯ ವಿಷಯವನ್ನು ಪ್ರಸ್ತಾಪಿಸಲು ಎಲ್ಲಾ ಕಾಂಗ್ರೆಸ್ ಸಂಸದರು ರಾಷ್ಟ್ರಪತಿ ಭವನದ ಕಡೆಗೆ ಮೆರವಣಿಗೆ ನಡೆಸುತ್ತಿದ್ದರು. ಆದರೆ ಅವರು ನಮ್ಮನ್ನು ಇಲ್ಲಿಂದ ಮುಂದೆ ಹೋಗಲು ಬಿಡುತ್ತಿಲ್ಲ. ಜನರ ಸಮಸ್ಯೆಗಳ ಬಗ್ಗೆ ದನಿ ಎತ್ತುವುದು ನಮ್ಮ ಕೆಲಸ. ಪ್ರತಿಭಟನೆಯಲ್ಲಿ ಕೆಲವು ಸಂಸದರ ಬಂಧನವಾಗಿದೆ. ಹಲವರಿಗೆ ಥಳಿಸಲಾಗಿದೆ" ಎಂದರು.

Congress Protest: Rahul Gandhi, Shashi Tharoor detained

"ದೇಶದ ಯುವಕರ ಭವಿಷ್ಯವನ್ನು ಸರಕಾರ ಹಾಳು ಮಾಡುತ್ತಿದೆ. ನಾವು ಶಾಂತಿಯುತವಾಗಿ ಪ್ರತಿಭಟಿಸಲು ಬಯಸುತ್ತೇವೆ. ಆದರೆ, ಸಂಸದರನ್ನು ಹೇಗೆ ಬಂಧಿಸಲಾಗುತ್ತಿದೆ ಎಂಬುದನ್ನು ನೀವು ನೋಡಬಹುದು" ಎಂದು ದೆಹಲಿಯಲ್ಲಿ ಪಕ್ಷದ ಪ್ರತಿಭಟನೆ ವೇಳೆ ಬಂಧಿತ ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಹೇಳಿದರು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಪಕ್ಷದ ಇತರ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಲು ರಸ್ತೆಯಲ್ಲಿಯೇ ಕುಳಿತು ಘೋಷಣೆ ಕೂಗಿದ್ದಾರೆ. ಈ ವೇಳೆ ಇತರ ಕಾರ್ಯಕರ್ತರನ್ನು ಪೊಲೀಸರು ಎಳೆದೊಯ್ದಿದ್ದಾರೆ.

Recommended Video

DK Shivakumar ಮತ್ತು ಸಿದ್ದರಾಮಯ್ಯ ಅಪ್ಪುಗೆಯ ಡ್ರಾಮಾ‌:ಡೈರೆಕ್ಷನ್ ರಾಹುಲ್ ಗಾಂಧಿ *Polirics | OneIndia Kannada

ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಶುಕ್ರವಾರ ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಲೆ ಏರಿಕೆ ವಿರೋಧಿಸಿ ಪಕ್ಷದ ಮುಖಂಡರು ಇಂದು ರಾಷ್ಟ್ರಪತಿ ಹಾಗೂ ಪ್ರಧಾನಿ ಮನೆಗೆ ಪಾದಯಾತ್ರೆ ನಡೆಸಲು ಯೋಜಿಸಿದ್ದರು. ದಾರಿ ಮಧ್ಯೆಯೇ ಅವರನ್ನು ತಡೆ ಹಿಡಿಯಲಾಗಿದೆ.

English summary
Congress Black Protest: Rahul Gandhi, Shashi Tharoor and several detained over Protest against the Central government's unemployment and GST hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X