ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಇಡಿಯಿಂದ ಸೋನಿಯಾ ವಿಚಾರಣೆ, ಕಾಂಗ್ರೆಸ್‌ ಪ್ರತಿಭಟನೆ

|
Google Oneindia Kannada News

ನವದೆಹಲಿ ಜುಲೈ 21: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೋನಿಯಾ ಗಾಂಧಿ ವಿಚಾರಣೆ ನಡೆಸುತ್ತಿದೆ. ಗುರುವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿಚಾರಣೆಯನ್ನು ಆರಂಭಿಸಲಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರ ಪ್ರತಿಭಟನೆ ತೀವ್ರಗೊಂಡಿದೆ.

ದೆಹಲಿಯ ತಮ್ಮ ನಿವಾಸದಿಂದ ಪುತ್ರಿಯ ಜೊತೆಗೆ ಸೋನಿಯಾ ಗಾಂಧಿ ಇಡಿ ಕಚೇರಿಗೆ ವಿಚಾರಣೆಗೆ ಆಗಮಿಸಿದರು. ಇಡಿ ಕಚೇರಿಯಲ್ಲಿ ಅಧಿಕಾರಿಗಳು ಸೋನಿಯಾ ಪಶ್ನಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಸೋನಿಯಾ ಗಾಂಧಿ ವಿಚಾರಣೆ ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಕಾಂಗ್ರೆಸ್‌ ಪಕ್ಷದ ಸಂಸದರು ದೆಹಲಿಯ ಅಕ್ಬರ್ ರಸ್ತೆಯ ಕಾಂಗ್ರೆಸ್ ಪಕ್ಷದ ಮುಖ್ಯ ಕಚೇರಿಯ ಮುಂಭಾಗ ಜಮಾಯಿಸಿದ್ದಾರೆ.

Congress protest support to Sonia Gandhi in New Delhi

ಬಿಜೆಪಿ ದುರುದ್ದೇಶದ ರಾಜಕಾರಣ ಮಾಡುತ್ತಿದೆ. ಅಧಿಕಾರ ಹಾಗೂ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

ದೇಶದ ಎಲ್ಲೆಡೆ ಸೋನಿಯಾ ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ನಾಮಫಲಕ ಹಿಡಿದು ಬೀದಿಗಿಳಿದಿದ್ದಾರೆ. ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಇಡಿ ವಿಚಾರಣೆ, ಹಗರಣದಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಹಿಂದೆ ಇದೇ ನ್ಯಾಷನಲ್ ಹೆರಾಲ್ಡ್ ಹಗರಣದ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ಸುಮಾರು 50 ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಆಗಲೂ ಕಾಂಗ್ರೆಸ್ ನ ದೆಹಲಿಮಟ್ಟದ ನಾಯಕರು ಪ್ರತಿಭಟನೆಯ ಅಸ್ತ್ರ ಪ್ರಯೋಗಿಸಿದ್ದರು. ಇದೀಗ ಸೋನಿಯಾ ಗಾಂಧಿ ವಿಚಾರಣೆ ನಡೆಸುತ್ತಿರುವ ಹಿನ್ನೆಲೆ ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಕಾಂಗ್ರೆಸ್‌ನ ಶಶಿ ತರೂರ್ ಸೇರಿದಂತೆ ಅನೇಕ ಸಂಸದರು, ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

English summary
Congress protest support to Sonia Gandhi in New Delhi. Sonia Gandhi appear before ED in the National Herald case,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X