ಸಿಬಿಐ ವಿವಾದ: ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ರಾಹುಲ್ ಬಂಧನ
ನವದೆಹಲಿ, ಅಕ್ಟೋಬರ್ 26: ಸಿಬಿಐ ನಿರ್ದೇಶಕರ ಹಠಾತ್ ಬದಲಾವಣೆ ಮತ್ತು ನಿರ್ದೇಶಕರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್, ಮತ್ತು ಇತರ ಪಕ್ಷಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಸಿಬಿಐ ಮುಖ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಯುತ್ತಿದ್ದು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಈ ಸಮಯದಲ್ಲಿ ರಾಹುಲ್ ಗಾಂಧಿ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಪಕ್ಷದ ಈ ಪ್ರತಿಭಟನೆಯಲ್ಲಿ ಟಿಎಂಸಿ ಸೇರಿದಂತೆ ಹಲವು ವಿರೋಧ ಪಕ್ಷಗಳು ಜೊತೆ ನೀಡಿದೆ. ಕಾಂಗ್ರೆಸ್‌ನ ಹಲವು ಪ್ರಮುಖ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಕಾಂಗ್ರೆಸ್ ಮುಖಂಡರು, ಎಎಪಿ ಮುಖಂಡರು, ಟಿಎಂಸಿ, ಸಿಪಿಐ(ಎಂ) ಮುಖಂಡರು ದೆಹಲಿಯ ದಯಾಳ್ ಸಿಂಗ್ ಕಾಲೇಜಿನಿಂದ ಸಿಬಿಐ ಮುಖ್ಯ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಮಾಡುತ್ತಿದ್ದಾರೆ. ಸಿಬಿಐ ಪಂಜರದೊಳಗಿದೆ ಎಂಬ ಪ್ಲೇಕಾರ್ಡ್‌ಗಳನ್ನು ಹಿಡಿದು ಪ್ರತಿಭಟನಾಕಾರರು ಮೆರವಣಿಗೆ ಮಾಡುತ್ತಿದ್ದಾರೆ.
#WATCH Congress President Rahul Gandhi and Ashok Gehlot lead the protest march to CBI HQ against the removal of CBI Chief Alok Verma. pic.twitter.com/7FNkhoWQCb
— ANI (@ANI) October 26, 2018
ಸಿಬಿಐ ಕಚೇರಿ ಮುಂದೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಸಿಬಿಐ ಕಚೇರಿಗಳ ಮುಂಚೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.











Click it and Unblock the Notifications