ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಐ ವಿವಾದ: ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ರಾಹುಲ್ ಬಂಧನ

|
Google Oneindia Kannada News

ನವದೆಹಲಿ, ಅಕ್ಟೋಬರ್ 26: ಸಿಬಿಐ ನಿರ್ದೇಶಕರ ಹಠಾತ್‌ ಬದಲಾವಣೆ ಮತ್ತು ನಿರ್ದೇಶಕರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್, ಮತ್ತು ಇತರ ಪಕ್ಷಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಸಿಬಿಐ ಮುಖ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಯುತ್ತಿದ್ದು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಈ ಸಮಯದಲ್ಲಿ ರಾಹುಲ್ ಗಾಂಧಿ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಬಿಐ ವಿವಾದ: 10 ದಿನಗಳಲ್ಲಿ ವರದಿ ಸಲ್ಲಿಸಲು ಸಿವಿಸಿಗೆ ಸುಪ್ರೀಂಕೋರ್ಟ್ ಸೂಚನೆಸಿಬಿಐ ವಿವಾದ: 10 ದಿನಗಳಲ್ಲಿ ವರದಿ ಸಲ್ಲಿಸಲು ಸಿವಿಸಿಗೆ ಸುಪ್ರೀಂಕೋರ್ಟ್ ಸೂಚನೆ

ಕಾಂಗ್ರೆಸ್ ಪಕ್ಷದ ಈ ಪ್ರತಿಭಟನೆಯಲ್ಲಿ ಟಿಎಂಸಿ ಸೇರಿದಂತೆ ಹಲವು ವಿರೋಧ ಪಕ್ಷಗಳು ಜೊತೆ ನೀಡಿದೆ. ಕಾಂಗ್ರೆಸ್‌ನ ಹಲವು ಪ್ರಮುಖ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

congress protesting against central government CBI move

ಕಾಂಗ್ರೆಸ್‌ ಮುಖಂಡರು, ಎಎಪಿ ಮುಖಂಡರು, ಟಿಎಂಸಿ, ಸಿಪಿಐ(ಎಂ) ಮುಖಂಡರು ದೆಹಲಿಯ ದಯಾಳ್ ಸಿಂಗ್ ಕಾಲೇಜಿನಿಂದ ಸಿಬಿಐ ಮುಖ್ಯ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಮಾಡುತ್ತಿದ್ದಾರೆ. ಸಿಬಿಐ ಪಂಜರದೊಳಗಿದೆ ಎಂಬ ಪ್ಲೇಕಾರ್ಡ್‌ಗಳನ್ನು ಹಿಡಿದು ಪ್ರತಿಭಟನಾಕಾರರು ಮೆರವಣಿಗೆ ಮಾಡುತ್ತಿದ್ದಾರೆ.

ಸಿಬಿಐನಲ್ಲೇ ಗಂಡಾಗುಂಡಿ: ಕಾಂಗ್ರೆಸ್‌ನಿಂದ ಬೆಂಗಳೂರಲ್ಲಿ ಪ್ರತಿಭಟನೆಸಿಬಿಐನಲ್ಲೇ ಗಂಡಾಗುಂಡಿ: ಕಾಂಗ್ರೆಸ್‌ನಿಂದ ಬೆಂಗಳೂರಲ್ಲಿ ಪ್ರತಿಭಟನೆ

ಸಿಬಿಐ ಕಚೇರಿ ಮುಂದೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಸಿಬಿಐ ಕಚೇರಿಗಳ ಮುಂಚೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

English summary
AICC Rahul Gandhi led protest march against central government in New Delhi opposing its move about CBI issue. many opposition parties took party led in that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X