"ಕಳಂಕಿತ ರಾಜೀನಾಮೆ ನಾವು ಕೇಳುತ್ತಿಲ್ಲ, ದೇಶವೇ ಆಗ್ರಹಿಸುತ್ತಿದೆ"
12:16:36ನವದೆಹಲಿ, ಆಗಸ್ಟ್ 04: ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕರ್ನಾಟಕದ ಸಂಸದರು ಸೇರಿ 25 ಜನ ಕಾಂಗ್ರೆಸ್ ಸಂಸದರನ್ನು 5 ದಿನದ ಮಟ್ಟಿಗೆ ಅಮಾನತುಗೊಂಡಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಂಸತ್ತಿನ ಬಳಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಬಳಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಲೋಕಸಭಾ ನಾಯಕ ಮಲ್ಲಿಕಾರ್ಜುನ ಖರ್ಗೆ, ಅಮಾನತುಗೊಂಡ ಸಂಸದರು ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ 44 ಜನ ಸಂಸದರನ್ನು ಹೊಂದಿದೆ. [ಕೆಎಚ್ ಮುನಿಯಪ್ಪ ಸೇರಿ 27 ಸಂಸದರು ಅಮಾನತು]
ಸುಷ್ಮಾ ಸ್ವರಾಜ್, ವಸುಂಧರಾ ರಾಜೇ ಹಾಗೂ ಎಚ್ ಆರ್ ಡಿ ಸಚಿವೆ ಸ್ಮೃತಿ ಇರಾನಿ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಾ ಬಂದಿವೆ. ಇದು ಕಾಂಗ್ರೆಸ್ ಪಕ್ಷದ ಆಗ್ರಹ ಮಾತ್ರವಲ್ಲ ಇಡೀ ದೇಶದ ಆಗ್ರಹವಾಗಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸೋಮವಾರ ಕೈಗೊಂಡ ಕ್ರಮ, 25 ಸಂಸದರನ್ನು ಅಮಾನತುಗೊಳಿಸಿದ್ದು, ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ - ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ.

ಎನ್ ಡಿಎ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಆರ್ ಜೆಡಿ, ಎನ್ ಸಿಪಿ, ಸಮಾಜವಾದಿ ಪಕ್ಷದಿಂದ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ರಾಜ್ಯಸಭೆಯಲ್ಲೂ ವಿಪಕ್ಷಗಳ ಗದ್ದಲ ಹೆಚ್ಚಾಗಿದ್ದರಿಂದ ಮಧ್ಯಾಹ್ನ 2 ಗಂಟೆ ತನಕ ಕಲಾಪವನ್ನು ಮುಂದೂಡಲಾಗಿದೆ.
|
ಅಮಾನತುಗೊಂಡವರು ಸಂಕೇತವಾಗಿದ್ದಾರೆ
ಅಮಾನತುಗೊಂಡವರು ಸಂಕೇತವಾಗಿದ್ದಾರೆ ನಮ್ಮ ಹೋರಾಟಕ್ಕೆ ಬಲ ತಂದಿದ್ದಾರೆ. ಇಡೀ ದೇಶದ ರೈತರು, ವಿದ್ಯಾರ್ಥಿಗಳು ಇನ್ನು ನಮ್ಮ ಜೊತೆ ಕೈಜೋಡಿಸಬೇಕಿದೆ: ರಾಹುಲ್ ಗಾಂಧಿ.
|
ವ್ಯಾಪಂ ಹಗರಣದಿಂದ ಅನೇಕ ಜನ ನಿರ್ಗತಿಕರಾಗಿದ್ದಾರೆ
ವ್ಯಾಪಂ ಹಗರಣದಿಂದ ಅನೇಕ ಜನ ನಿರ್ಗತಿಕರಾಗಿದ್ದಾರೆ. ಲಲಿತ್ ಗೇಟ್ ನಿಮಗೆ ಗೊತ್ತೇ ಇದೆ. ಸುಷ್ಮಾ ಸ್ವರಾಜ್ ಅವರು ಕಾನೂನು ಮುರಿದಿದ್ದಾರೆ. ಲಲಿತ್ ಮೋದಿ ಜೊತೆ ರಾಜಸ್ಥಾನ್ ಸಿಎಂ ಆರ್ಥಿಕ ವ್ಯವಹಾರ ಇಟ್ಟುಕೊಂಡಿದ್ದಾರೆ.
|
ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಿರತ ಕಾಂಗ್ರೆಸ್ಸಿಗರು
ಸಂಸತ್ತಿನ ಬಳಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಿರತ ಕಾಂಗ್ರೆಸ್ಸಿಗರು.
|
ಕಾಂಗ್ರೆಸ್ ಪ್ರತಿಭಟನೆ ನಗೆ ತರಿಸುತ್ತಿದೆ: ಬಿಜೆಪಿ
ಕಾಂಗ್ರೆಸ್ ಪ್ರತಿಭಟನೆ ನಗೆ ತರಿಸುತ್ತಿದೆ, ಮೊದಲು ಅಮ್ಮ ಅಪ್ಪನ ಸಾಯಿಸಿಬಿಟ್ಟು ಅನಾಥ ನಾದೆ ಎಂದು ಹೇಳಿಕೊಳ್ಳುವ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಇದೆ: ಬಿಜೆಪಿ ವಕ್ತಾರೆ ಮೀನಾಕ್ಷಿ ಲೇಖಿ
|
ಅಮಾನತ್ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು
ಅಮಾನತ್ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು, ಇಲ್ಲಿದೆ ವಿಡಿಯೋ
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications