'ಕೈ' ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ರಾಜಸ್ಥಾನ ಸಿಎಂ ಪುತ್ರ ಸ್ಪರ್ಧೆ
ನವದೆಹಲಿ, ಮಾರ್ಚ್ 28: ಕಾಂಗ್ರೆಸ್ ಪಕ್ಷವು ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ ಗಳಿಗೆ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಗುಜರಾತ್‌ನ ಆರು, ಉತ್ತರ ಪ್ರದೇಶದ ಆರು ಮತ್ತು ರಾಜಸ್ಥಾನದ 31 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಇಂದು ರಾತ್ರಿ ಬಿಡುಗಡೆ ಮಾಡಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೆ ಜೋಧಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವು ಬಲಗೊಳ್ಳುತ್ತಿದ್ದು, ಕೆಲವು ದಿನಗಳಲ್ಲಿ ಹಲವು ಹಿರಿಯ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಳಿಸಿದ್ದಾರೆ. 12 ಪಕ್ಷೇತರ ಶಾಸಕರು ಸಹ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.












Click it and Unblock the Notifications