• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತೈಲ ಬೆಲೆ ಏರಿಕೆ ಹಿನ್ನೆಲೆ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ಟ್ವೀಟ್ ಅಸ್ತ್ರ

|

ನವದೆಹಲಿ, ಫೆಬ್ರವರಿ.25: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹರಿ ಹಾಯ್ದಿದ್ದಾರೆ.

ಕಳೆದ ಮೂರು ತಿಂಗಳಿನಲ್ಲಿ ಸಿಲಿಂಡರ್ ಬೆಲೆಯು 200 ರೂಪಾಯಿ ಹೆಚ್ಚಳವಾಗಿದೆ. ದೇಶದ ಸಾಮಾನ್ಯ ಜನರ ಮೇಲೆ ಪ್ರಧಾನಮಂತ್ರಿ ಮೋದಿ ನೇತೃತ್ವದ ಸರ್ಕಾರವು ಹೆಚ್ಚಿನ ಹೊರೆ ಹಾಕುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಫೆಬ್ರವರಿಯಲ್ಲಿ ಮತ್ತೊಮ್ಮೆ ಅಡುಗೆ ಅನಿಲ ದರ ಏರಿಕೆ

ತಮ್ಮ ಕೋಟ್ಯಧಿಪತಿ ಗೆಳೆಯರಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎರಡು ಕಡೆಗಳಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಜನ ಸಾಮಾನ್ಯರ ಮೇಲೆ ತೆರಿಗೆಯ ಹೊರ ಹೊರೆಸುತ್ತಿದ್ದಾರೆ. ಹೀಗಾಗಿ ದೇಶೀಯ ಸಿಲಿಂಡರ್ ದರ ಕಳೆದ ಮೂರು ತಿಂಗಳಿನಲ್ಲಿ 200 ರೂಪಾಯಿ ಹೆಚ್ಚಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ ಶತಕದತ್ತ ದಾಪುಗಾಲಿಡುತ್ತಿದೆ ಎಂದು ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವಿಟರ್ ನಲ್ಲಿ ಕಿಡಿ ಕಾರಿದ್ದಾರೆ.

10 ದಿನಗಳಿಂದ ನಿರಂತರ ಏರಿಕೆ:

ದೇಶದಲ್ಲಿ ಕಳೆದ 10 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದೆ. ಹಲವು ರಾಜ್ಯಗಳಲ್ಲಿ ಈಗಾಗಲೇ ಇಂಧನ ಬೆಲೆಯು 100 ರೂಪಾಯಿ ದಾಟಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಲವು ರಾಜ್ಯಗಳಲ್ಲಿ ಪ್ರತಿಪಕ್ಷ ನಾಯಕರು ಪ್ರತಿಭಟನೆಯನ್ನೂ ನಡೆಸುತ್ತಿದ್ದಾರೆ.

ಒಂದೇ ತಿಂಗಳಲ್ಲಿ 3 ಬಾರಿ ಸಿಲಿಂಡರ್ ದರ ಏರಿಕೆ:

ಫೆಬ್ರವರಿ ಒಂದೇ ತಿಂಗಳಿನಲ್ಲಿ ಬರೋಬ್ಬರಿ ಮೂರು ಬಾರಿ ಸಿಲಿಂಡರ್ ದರವನ್ನು ಏರಿಕೆ ಮಾಡಲಾಗಿದೆ. ಗೃಹ ಬಳಕೆಯ 14.2 ಕೆ.ಜಿ ಎಲ್ ಪಿ ಜಿ ಸಿಲಿಂಡರ್ ಬೆಲೆಯಲ್ಲಿ 25 ರೂಪಾಯಿ ಏರಿಕೆ ಮಾಡಲಾಗಿದ್ದು, ಗುರುವಾರದಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಫೆಬ್ರವರಿ ತಿಂಗಳಿನಲ್ಲೇ ಸಿಲಿಂಡರ್ ದರದಲ್ಲಿ ಬರೋಬ್ಬರಿ 100 ರೂ ಏರಿಕೆ ಮಾಡಲಾಗಿದೆ.

English summary
Congress Secretary Priyanka Gandhi Slams Modi Govt's On Fuel Prices In Twitter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X