ಕಾಂಗ್ರೆಸ್ ಹಿರಿಯ ನಾಯಕನ ಪುತ್ರ ಅನಿಲ್ ಆಂಟೋನಿ ಬಿಜೆಪಿ ಸೇರ್ಪಡೆ
ನವದೆಹಲಿ, ಏಪ್ರಿಲ್ 06: ಬಿಬಿಸಿ ಸಾಕ್ಷ್ಯಚಿತ್ರದ ಕುರಿತು ಸ್ವಪಕ್ಷ ನಿಲುವನ್ನು ಟೀಕಿಸಿದ್ದ ಕಾಂಗ್ರೆಸ್‌ನ ಹಿರಿಯ ರಾಜಕಾರಣಿಯೊಬ್ಬರು ಪುತ್ರ ಗುರುವಾರ ಅಧಿಕೃತವಾಗಿ ಕಮಲ ಪಡೆಯನ್ನು ಸೇರಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟೋನಿಯವರು ಇದೇ ಗುರುವಾರ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಯಾದರು. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ವಿ.ಮುರಳೀಧರನ್ ಅವರು ಪಕ್ಷಕ್ಕೆ ಸೇರ್ಪಡೆಯಾದ ಅನಿಲ್ ಆಂಟೋನಿ ಅವರನ್ನು ಬರಮಾಡಿಕೊಂಡರು.

ಬಿಜೆಪಿ ಸೇರಿದ ಅನಿಲ್ ಆಂಟೋನಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಡಿಜಿಟಲ್ ಮಾಧ್ಯಮ ಸಂಚಾಲಕ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ರಾಷ್ಟ್ರೀಯ ಸಂಯೋಜಕ ಸ್ಥಾನ ಹೊಂದಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಪಕ್ಷದಲ್ಲಿನ ಎಲ್ಲ ಸ್ಥಾನಗಳಿಗೆ ಕಳೆದ ಜನವರಿ ತಿಂಗಳಲ್ಲಿ ರಾಜೀನಾಮೆ ನೀಡಿದ್ದರು.
ಅಂದಿನಿಂದಲೇ ತಮ್ಮ ಎಲ್ಲ ಸ್ಥಾನ ದೊರೆತ ಅನಿಲ್ ಆಂಟೋನಿಯವರು ಅವರು ಬಿಜೆಪಿ ಸೇರಿತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ಅವರು ಬಿಜೆಪಿ ಸೇರುವ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿವೆ. ಮಧ್ಯೆ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರಿ ಚರ್ಚೆಯ ವಿಷಯಗಳೆಲ್ಲವನ್ನು ಅಧಿಕೃತಗೊಳಿಸಿದರು.
'ದೇಶ'ಕ್ಕಾಗಿ ಬಿಜೆಪಿ ಸೇರ್ಪಡೆ: ಕಾಂಗ್ರೆಸ್ ವಿರುದ್ಧ ಆಂಟೋನಿ ವಾಗ್ದಾಳಿ
ಬಿಜೆಪಿ ಸೇರ್ಪಡೆಯಾದ ಬಳಿಕ ಮಾತನಾಡಿದ ಅನಿಲ್ ಆಂಟೋನಿಯವರು, ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಕುಟುಂಬಕ್ಕಾಗಿ ದುಡಿಯುವುದು ತಮ್ಮ ಧರ್ಮ ಎಂದುಕೊಂಡಿದ್ದಾರೆ, ಅದನ್ನೆ ನಂಬಿದ್ದಾರೆ. ದೇಶಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ನನ್ನ ಧರ್ಮವಾಗಿದೆ ಎಂದು ಅವರು ತಿಳಿಸಿದರು. ಈ ಮೂಲಕ ತಮ್ಮ ಮಾಜಿ ಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮ ತಂದೆ ಎಕೆ ಆಂಟನಿ ಅವರು ಮತ್ತು ನಮ್ಮ ನಡುವಿನ ಸಂಬಂಧ ಉತ್ತಮವಾಗಿದೆ. ನಮ್ಮಿಬ್ಬರ ಮಧ್ಯ ಇರುವುದು ಸಿದ್ಧಾಂತ ಭಿನ್ನಾಬಿಪ್ರಾಯಗಳು ಮಾತ್ರ. ಅದರ ಹೊರತು ಯಾವುದೇ ವಿಚಾರದಲ್ಲಿ ವಿರೋಧಗಳು ನಮ್ಮಲ್ಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಬಿಜೆಪಿ ಸೇರ್ಪಡೆಯಾಗುವ ಮೂಲಕ ನಾನು ಸರಿಯಾದ ಹೆಜ್ಜೆ ಇಟ್ಟಿದ್ದೇನೆ. ಜೊತೆಗೆ ತಂದೆಅವರೊಂದಿಗಿನ ಪ್ರೀತಿ, ಗೌರವ ಕೊನೆಯವರೆಗೂ ಹಾಗೇ ಉಳಿಯಲಿದೆ ಎಂದು ಹೇಳಿದರು.
ಮೋದಿ ಸಾಕ್ಷ್ಯಚಿತ್ರ ಡಿಲಿಟ್‌ಗೆ ಆಂಟೋನಿ ಸ್ಪಷ್ಟನೆ
ಬಿಜೆಪಿ ಜೊತೆಗಿನ ಭಿನ್ನಾಭಿಪ್ರಾಯ, ಬಿಬಿಸಿಯ ತಯಾರಿಸಿದ ಸಾಕ್ಷ್ಯಚಿತ್ರ ಕುರಿತು ಆನಿಲ್ ಆಂಟೋನಿ ಅವರು ಟ್ವೀಟ್ ಮಾಡಿದ್ದರು. ಬಳಿಕ ಅದನ್ನು ಡಿಲೀಟ್ ಮಾಡಿದ್ದರು. ಆ ಬಗ್ಗೆ ಪ್ರತಿಕ್ರಿಯಿಸಿದರ ಆಂಟೋನಿ, ಟ್ವೀಟ್ ಮಾಡಿದ ಬಳಿಕ ಸಾಕಷ್ಟು ಅಸಹಿಷ್ಣು ದೂರವಾಣಿ ಕರೆಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಟೀಕೆ ವ್ಯಕ್ತವಾಗುವ ಜೊತೆಗೆ ಸ್ವಪಕ್ಷದ ಒಳಗಿನಿಂದಲೇ ನಿಂದನೆಗಳು ಹೆಚ್ಚಾಗಿ ಬಂದವು. ಈ ಕಾರಣದಿಂದ ಟ್ವೀಟ್ ಡಿಲೀಟ್ ಮಾಡಿದ್ದೇ ಎಂದು ತಿಳಿಸಿದರು.

ಇಂದಿನಿ ಪ್ರಧಾನಮಂತ್ರಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ 2002 ರಲ್ಲಿ ಗುಜರಾತ್‌ನಲ್ಲಿ ನಡೆದ ಗಲಭೆ ನಡೆದಿತ್ತು. ಆ ವೇಳೆ ಸಂಭವಿಸಿದ್ದ ಘಟನೆಗಳನ್ನು ವಿವರಿಸುವ ಬಿಬಿಸಿ ಸಾಕ್ಷ್ಯಚಿತ್ರ 'ಇಂಡಿಯಾ: ದಿ ಮೋದಿ ಕ್ವೆಶ್ಶನ್' ಎಂಬ ಸಾಕ್ಷ್ಯಚಿತ್ರ ಭಾರತದಲ್ಲಿ ಭಾರೀ ಸಂಚಲನ ಹುಟ್ಟು ಹಾಕಿತ್ತು.
ಸಾಕಷ್ಟು ಪರ ವಿರೋಧಗಳಿಗೆ ಕಾರಣವಾಗಿತ್ತು. ಬಳಿಕ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ಸಾಕ್ಷ್ಯಚಿತ್ರ ತೆಗೆದು ಹಾಕಲಾಯಿತು. ಬಿಜೆಪಿಯ ಈ ಕ್ರಮವನ್ನು ಪ್ರತಿಪಕ್ಷಗಳು ಟೀಕಿಸಿದವು. ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಜೆಎನ್‌ಯು ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದರು.
-
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications