ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೆ ರಾಹುಲ್‌ ಗಾಂಧಿಯನ್ನು ಎಐಸಿಸಿ ಅಧ್ಯಕರನ್ನಾಗಿ ಮಾಡಲು ಯತ್ನ

|
Google Oneindia Kannada News

ನವದೆಹಲಿ, ಅಕ್ಟೋಬರ್ 31: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಮತ್ತೆ ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಲು ಪ್ರಯತ್ನ ನಡೆಯುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಕೆಲವೇ ದಿನಗಳಲ್ಲಿ ಸಭೆ ನಡೆಯಲಿದ್ದು, ಅಂದೇ ಅಂತಿಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯ ಹೆಸರನ್ನೇ ಪ್ರಸ್ತಾಪಿಸುವ ಕುರಿತು ಕೆಲವು ಚರ್ಚೆಗಳು ನಡೆದಿವೆ ಎನ್ನಲಾಗಿದೆ.

ಮತ ಕೇಳಿ ಟ್ವೀಟ್: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು ಮತ ಕೇಳಿ ಟ್ವೀಟ್: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು

ಎಲ್ಲಾ ರಾಜ್ಯ ಕಾಂಗ್ರೆಸ್ ಘಟಕಗಳಿಗೂ ನೋಟಿಸ್ ಕಳುಹಿಸಲಾಗಿದ್ದು ಮತ ಚಲಾಯಿಸಲು ಅರ್ಹ ಸದಸ್ಯರ ಪಟ್ಟಿ ಕಳುಹಿಸುವಂತೆ ಸೂಚಿಸಲಾಗಿದೆ.

ಎಐಸಿಸಿ ಸಭೆ ಕರೆಯಲು ನಿರ್ಧಾರ

ಎಐಸಿಸಿ ಸಭೆ ಕರೆಯಲು ನಿರ್ಧಾರ

ಎಐಸಿಸಿಯೂ ತನ್ನ ಸಭೆ ಕರೆಯಲು ನಿರ್ಧರಿಸಿದ್ದು ಶೀಘ್ರವೇ ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಿ ತಿಳಿಸಲಾಗುವುದು ಎಂದು ಎಲ್ಲಾ ಕಾಂಗ್ರೆಸ್ ರಾಜ್ಯ ಘಟಕಗಳಿಗೆ ತಿಳಿಸಲಾಗಿದೆ.
2020ರ ಅಂತ್ಯದಲ್ಲಿ ಇಲ್ಲ ಮುಂದಿನ ವರ್ಷದ ಆರಂಭದಲ್ಲಿ ಎಐಸಿಸಿ ಸಭೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಸೋನಿಯಾ ಕೆಳಗಿಳಿದರೆ ರಾಹುಲ್ ಹುದ್ದೆಗೇರಬೇಕು

ಸೋನಿಯಾ ಕೆಳಗಿಳಿದರೆ ರಾಹುಲ್ ಹುದ್ದೆಗೇರಬೇಕು

ಸೋನಿಯಾ ಗಾಂಧಿ ಅವರು ಹುದ್ದೆಯಿಂದ ಕೆಳಗಿಳಿಯಲು ಬಯಸಿದರೇ ನೀವೇ ಹುದ್ದೆ ಅಲಂಕರಿಸಬೇಕು ಎಂದು ರಾಹುಲ್ ಗಾಂಧಿಗೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್
ಅಮರಿಂದರ್ ಸಿಂಗ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಭಾಗೆಲ್ ಸೇರಿದಂತೆ ಹಲವಾರು ರಾಜ್ಯ ಕಾಂಗ್ರೆಸ್ ನಾಯಕರು ಕೋರಿದ್ದಾರೆ.

ವಿಧಾನಸಭೆ ಚುನಾವಣೆ ಮುನ್ನವೇ ಅಧ್ಯಕ್ಷರ ಆಯ್ಕೆ

ವಿಧಾನಸಭೆ ಚುನಾವಣೆ ಮುನ್ನವೇ ಅಧ್ಯಕ್ಷರ ಆಯ್ಕೆ

ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುನ್ನವೇ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಅಧಿಕೃತ ಪ್ರಕಟಣೆಯೊಂದೇ ಬಾಕಿ

ಅಧಿಕೃತ ಪ್ರಕಟಣೆಯೊಂದೇ ಬಾಕಿ

ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಕಪಿಲ್ ಸಿಬಲ್ ಮತ್ತು ಶಶಿ ತರೂರ್ ಸೇರಿದಂತೆ ಕಾಂಗ್ರೆಸ್ ನ 23 ಹಿರಿಯ ನಾಯಕರು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈಗಾಗಲೇ ಎಲ್ಲವೂ ನಿರ್ಧಾರವಾಗಿದ್ದು, ಅಧಿಕೃತವಾಗಿ ಪ್ರಕಟಿಸಬೇಕಾಗಿದೆ. ಫೆಬ್ರವರಿ 2011ಕ್ಕೆ ಹೊಸ ಅಧ್ಯಕ್ಷರ ಆಯ್ಕೆಯಾಗಲಿದೆ ಎಂದು ಸೋನಿಯಾಗಾಂಧಿ ಆಗಸ್ಟ್ ತಿಂಗಳಲ್ಲಿ ತಿಳಿಸಿದ್ದರು.

English summary
With chorus growing for former Congress president Rahul Gandhi to come back, the All India Congress Committee (AICC) will soon call a session to elect a new chief. All state units have been asked to send details of members who are eligible to vote.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X