ಬಿಜೆಪಿ ಮೇಲೆ ಕಾಂಗ್ರೆಸ್ ಸರ್ಜಿಕಲ್ ಸ್ಟ್ರೈಕ್ ಮಾಡಬೇಕಿದೆ: ಕಪಿಲ್ ಸಿಬಲ್
ನವದೆಹಲಿ, ಆಗಸ್ಟ್ 27: ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಲಹ ಇನ್ನೂ ಶಮನಗೊಂಡಿಲ್ಲ. ಪಕ್ಷಕ್ಕೆ ಪೂರ್ಣಾವಧಿ ನಾಯಕತ್ವದ ಅಗತ್ಯವಿದೆ ಎಂದು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪಕ್ಷದ ಹಿರಿಯ ನಾಯಕರು ಪತ್ರ ಬರೆದಿದ್ದರು. ಇದು ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ತೀವ್ರ ಚರ್ಚೆಗೊಳಗಾಗಿತ್ತು.
ಹೀಗೆ ಪತ್ರ ಬರೆದಿದ್ದ 23 ನಾಯಕರ ಪೈಕಿ ಪ್ರಮುಖ ಸದಸ್ಯರಾದ ಕಪಿಲ್ ಸಿಬಲ್, ಪಕ್ಷವು ತನ್ನದೇ ಸದಸ್ಯರಾದ ಜಿತಿನ್ ಪ್ರಸಾದ ಅವರನ್ನು ಟಾರ್ಗೆಟ್ ಮಾಡುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಈ ಸಂದರ್ಭದಲ್ಲಿ ಸರ್ಜಿಕಲ್ ಸ್ಟ್ರೈಕ್ಗಳೊಂದಿಗೆ ಬಿಜೆಪಿಯನ್ನು ಗುರಿಯಾಗಿರಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಕೇಂದ್ರದ ಮಾಜಿ ಸಚಿವರಲ್ಲಿ ಒಬ್ಬರಾಗಿರುವ ಜಿತಿನ್ ಪ್ರಸಾದ, ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು ಹಾಗೂ ಇತರೆ ಬದಲಾವಣೆಗಳನ್ನು ತರಬೇಕು ಎಂದು ಒತ್ತಾಯಿಸಿ ಪತ್ರ ಬರೆದಿದ್ದ ಹಿರಿಯ ಮುಖಂಡರಲ್ಲಿ ಒಬ್ಬರು. ಈ ಪತ್ರ ಬರೆದಿದ್ದ ಸಮಯ, ಅದು ಮಾಧ್ಯಮಗಳಲ್ಲಿ ಸೋರಿಕೆಯಾಗಿದ್ದು ಸೇರಿದಂತೆ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ 23 ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಈ ಸಭೆಗೆ ವಿಶೇಷ ಆಹ್ವಾನಿತರಾಗಿದ್ದವರಲ್ಲಿ ಜಿತಿನ್ ಪ್ರಸಾದ ಕೂಡ ಇದ್ದರು.

ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ ಅವರನ್ನು ಪಕ್ಷದಿಂದಲೇ ಟಾರ್ಗೆಟ್ ಮಾಡಲಾಗುತ್ತಿರುವುದು ದುರದೃಷ್ಟಕರ. ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಸದಸ್ಯರನ್ನು ಟಾರ್ಗೆಟ್ ಮಾಡುವ ಬದಲಾಗಿ ಬಿಜೆಪಿಯನ್ನು ಗುರಿಯಾಗಿರಿಸಿ ಸರ್ಜಿಕಲ್ ಸ್ಟ್ರೈಕ್ಗಳನ್ನು ಮಾಡಬೇಕಿದೆ ಎಂದು ಸಿಬಲ್ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications