ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರದ ಅಗ್ನಿಪಥ್ ಯೋಜನೆಯ ವಿರುದ್ಧ 'ಸತ್ಯಾಗ್ರಹ'ದ ಪಥ ಹಿಡಿದ ಕಾಂಗ್ರೆಸ್

|
Google Oneindia Kannada News

ನವದೆಹಲಿ, ಜೂನ್ 19: ಕೇಂದ್ರ ಸರ್ಕಾರವು ಸಶಸ್ತ್ರ ಪಡೆಗಳ ನೇಮಕಾತಿಗಾಗಿ ಹೊಸದಾಗಿ ಘೋಷಿಸಿದ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಭಾನುವಾರ ಕಾಂಗ್ರೆಸ್ ಸತ್ಯಾಗ್ರಹ ನಡೆಸುತ್ತಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪಕ್ಷದ ಸಂಸದರು ಮತ್ತು ಮುಖಂಡರು ಹಾಜರಾಗಿ ಧರಣಿ ನಡೆಸಿದರು. ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್, ರಾಜೀವ್ ಶುಕ್ಲಾ, ಸಚಿನ್ ಪೈಲಟ್, ಸಲ್ಮಾನ್ ಖುರ್ಷಿದ್ ಮತ್ತು ಅಲ್ಕಾ ಲಾಂಬಾ 'ಸತ್ಯಾಗ್ರಹ'ದಲ್ಲಿ ಭಾಗವಹಿಸಿದ್ದರು. ಆ ಮೂಲಕ ಯುವಕರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ಸೂಚಿಸಿದರು.

Explainer: ಅಗ್ನಿಪಥ್ ಯೋಜನೆಗೆ ವಿರೋಧವೇಕೆ? ಪ್ರತಿಭಟನಾಕಾರರ ಬೇಡಿಕೆಗಳೇನು?Explainer: ಅಗ್ನಿಪಥ್ ಯೋಜನೆಗೆ ವಿರೋಧವೇಕೆ? ಪ್ರತಿಭಟನಾಕಾರರ ಬೇಡಿಕೆಗಳೇನು?

ಕೇಂದ್ರ ಸರ್ಕಾರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರು ಮತ್ತು ಬೆಂಬಲಿಗರು ಅಗ್ನಿಪಥ್ ಯೋಜನೆಯನ್ನು ಕಟುವಾಗಿ ಟೀಕಿಸಿದರು. ದೇಶದ ಯುವಕರಿಗೆ ಯೋಜನೆಯು ಪ್ರಯೋಜನಕಾರಿಯಾಗಿಲ್ಲ, ಅಲ್ಲದೇ ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿ ಆಗಿದೆ ಎಂದು ದೂಷಿಸಿದರು.

ಶಾಂತಿಯುತ ಹೋರಾಟ ಮಾಡುವಂತೆ ಯುವಕರಿಗೆ ಮನವಿ

ಶಾಂತಿಯುತ ಹೋರಾಟ ಮಾಡುವಂತೆ ಯುವಕರಿಗೆ ಮನವಿ

ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಹಿಂತೆಗೆದುಕೊಳ್ಳುವಂತೆ ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಆಗ್ರಹಿಸಿದರು. ಪ್ರತಿಭಟನಾನಿರತ ಯುವಕರು ಹಿಂಸಾಚಾರಕ್ಕೆ ಮುಂದಾಗಬಾರದು ಎಂದು ಮನವಿ ಮಾಡಿದ ಅವರು, ಅಗ್ನಿಪಥ್ ಯೋಜನೆ ವಿರೋಧಿಸುವುದು ಯುವಕರ ಹಕ್ಕು, ಆದರೆ ಶಾಂತಿಯುತವಾಗಿ ನಡೆಯಬೇಕು, ಹಿಂಸಾಚಾರ ಬೇಡ ಎಂದರು.

"ಅಗ್ನಿಪಥ್ ಯೋಜನೆಯನ್ನು ನಿವೃತ್ತ ಸೇನಾಧಿಕಾರಿಗಳೆಲ್ಲರೂ ತಿರಸ್ಕರಿಸಿದ್ದಾರೆ. ಸೇನೆಯಲ್ಲಿ ಅನುಭವ ಇರುವವರ ಪ್ರತಿಕ್ರಿಯೆಯನ್ನು ನೀವು ನೋಡಿದ್ದರೆ, ಈ ಯೋಜನೆಯು ಯಾವುದೇ ರೀತಿಯಲ್ಲಿ ದೇಶದ ಹಿತಾಸಕ್ತಿಯಲ್ಲ ಎಂದು ಎಲ್ಲರೂ ಒಂದೇ ಧ್ವನಿಯಲ್ಲಿ ಹೇಳುತ್ತಿದ್ದಾರೆ. ಯುವಜನರ ಹಿತಾಸಕ್ತಿಯಲ್ಲ, ಸರ್ಕಾರ ಶೀಘ್ರ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಅದನ್ನು ಹಿಂಪಡೆಯಬೇಕು ಎಂದು ಗೆಹ್ಲೋಟ್ ಆಗ್ರಹಿಸಿದ್ದಾರೆ.

700 ಕೋಟಿ ಮೌಲ್ಯದ ಸರ್ಕಾರದ ಆಸ್ತಿಪಾಸ್ತಿ ನಷ್ಟ

700 ಕೋಟಿ ಮೌಲ್ಯದ ಸರ್ಕಾರದ ಆಸ್ತಿಪಾಸ್ತಿ ನಷ್ಟ

ಕೇಂದ್ರ ಸರ್ಕಾರವು ಜೂನ್ 14ರ ಮಂಗಳವಾರ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಅನಾವರಣಗೊಳಿಸಿದ್ದು, ಇದನ್ನು "ಪರಿವರ್ತನೆ" ಯೋಜನೆ ಎಂದು ಕರೆಯಿತು. ದೇಶದ ಭೂ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೈನಿಕರ ನೇಮಕಾತಿಗಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಯಿತು. ಆದರೆ, ಕೇಂದ್ರ ಸರ್ಕಾರದ ವಿರುದ್ಧ ಎಂಟು ರಾಜ್ಯಗಳಲ್ಲಿ ಯುವ ಸಮುದಾಯ ಕೆರಳಿ ರಸ್ತೆಗಿಳಿಯಿತು. ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಯೋಜನೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತು. ರೈಲಿನ ಬೋಗಿಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿತು, ಈ ಹಂತದಲ್ಲಿ ಸರ್ಕಾರಕ್ಕೆ ಸಂಬಂಧಿಸಿದ 700 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ರಾಜನಾಥ್ ಸಿಂಗ್ ನೇತೃತ್ವದಲ್ಲಿ ಎರಡನೇ ಬಾರಿ ಸಭೆ

ರಾಜನಾಥ್ ಸಿಂಗ್ ನೇತೃತ್ವದಲ್ಲಿ ಎರಡನೇ ಬಾರಿ ಸಭೆ

ಕೇಂದ್ರ ಸರ್ಕಾರವು ಅಗ್ನಿಪಥ್ ಯೋಜನೆಯನ್ನು ಘೋಷಿಸಿದ ಮರುಘಳಿಗೆಯಲ್ಲೇ ಪ್ರತಿಭಟನೆ ಕಿಚ್ಚು ಹೊತ್ತಿಕೊಂಡಿತು. ಕಳೆದ ಎರಡು ದಿನಗಳಲ್ಲಿ ಪ್ರತಿಭಟನೆಯು ಉಗ್ರ ರೂಪಕ್ಕೆ ತಿರುಗಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎರಡನೇ ಬಾರಿ ಸಭೆ ನಡೆಸಿದರು. ಭಾನುವಾರದ ಸಭೆಯಲ್ಲಿ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಉಪಸ್ಥಿತರಿದ್ದರು.

ಅಗ್ನಿಪಥ್ ಯೋಜನೆಯ ಮೇಲಿನ ಭಾರೀ ಕೋಪದ ಹಿನ್ನೆಲೆ ಇತರೆ ಕ್ರಮಗಳ ಜೊತೆಗೆ ಅಗತ್ಯವಿರುವ ಅರ್ಹತಾ ಮಾನದಂಡಗಳನ್ನು ಪೂರೈಸುವ ಕುರಿತು ಚರ್ಚೆ ನಡೆಸಲಾಯಿತು. ಅಗ್ನಿವೀರ್‌ಗಳಿಗೆ ರಕ್ಷಣಾ ಸಚಿವಾಲಯದಲ್ಲಿನ ಖಾಲಿ ಹುದ್ದೆಗಳಲ್ಲಿ ಶೇ.10ರಷ್ಟು ಮೀಸಲಾತಿಯನ್ನು ಘೋಷಿಸಿದ ಮರುದಿನವೇ ಸಭೆ ಕರೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು.

ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ ತಿಳಿಯಿರಿ

ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ ತಿಳಿಯಿರಿ

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯು ದೇಶದ ಮೂರು ಸೇನೆಗಳಿಗೆ ಯೋಧರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ್ದಾಗಿದೆ. 17.5 ರಿಂದ 23 ವಯೋಮಾನ ಯುವಕರನ್ನು ಒಪ್ಪಂದದ ಮೇರೆಗೆ ನಾಲ್ಕು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಅವಧಿಯಲ್ಲಿ 6 ತಿಂಗಳು ತರಬೇತಿಯೂ ಸೇರಿರುತ್ತದೆ.

ನಾಲ್ಕು ವರ್ಷದ ಸೇವಾವಧಿಯಲ್ಲಿ ಮಾಸಿಕ 30 ರಿಂದ 40 ಸಾವಿರ ರೂಪಾಯಿ ವೇತನದ ಜೊತೆಗೆ ವೈದ್ಯಕೀಯ ವಿಮೆ ಮತ್ತು ಆರೋಗ್ಯ ವಿಮೆ ಸೌಲಭ್ಯವನ್ನು ನೀಡಲಾಗುತ್ತದೆ. ಆದರೆ ನಾಲ್ಕು ವರ್ಷಗಳ ನಂತರ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಶೇ.75ರಷ್ಟು ಯೋಧರನ್ನು ಸೇನೆಯಿಂದ ವಿಮುಕ್ತಿಗೊಳಿಸಲಾಗುವುದು. ತದನಂತರದಲ್ಲಿ ಈ ಯೋಧರಿಗೆ ಯಾವುದೇ ರೀತಿ ಪಿಂಚಣಿ ಸೌಲಭ್ಯವನ್ನು ನೀಡಲಾಗುವುದಿಲ್ಲ.

ಮುಂದಿನ ಒಂದೂವರೆ ವರ್ಷದ ಅವಧಿಯಲ್ಲಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಸುಮಾರು 10 ಲಕ್ಷ ಯುವಕರಿಗೆ ಉದ್ಯೋಗವನ್ನು ಕಲ್ಪಿಸುವ ಗುರಿಯೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

English summary
Congress sits on ‘Satyagraha’ seeking rollback of Agnipath Recruitment Scheme in New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X