ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ವಿವಾದ: ಸಂಸತ್ ಮುಂದೆ ಸೋನಿಯಾ ಗಾಂಧಿ ಪ್ರತಿಭಟನೆ

|
Google Oneindia Kannada News

ನವದೆಹಲಿ, ನವೆಂಬರ್ 25: ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿಯ ಬೆಳವಣಿಗೆಯಲ್ಲಿ ಬಿಜೆಪಿ ಮತ್ತು ಎನ್‌ಸಿಪಿ ಜತೆಗೂಡಿ ಸರ್ಕಾರ ರಚಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಸಂಸತ್ ಆವರಣದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಸೋಮವಾರ ಪ್ರತಿಭಟನೆ ನಡೆಯಿತು.

'ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಿಸಿ' ಎಂಬ ಬ್ಯಾನರ್ ಹಿಡಿದ ಕಾಂಗ್ರೆಸ್ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಬೂಟಾಟಿಕೆಗೆ ಹೊಸ ಅರ್ಥ ಸಿಕ್ಕಿದೆ: ಸಿ.ಟಿ. ರವಿ ವ್ಯಂಗ್ಯಬೂಟಾಟಿಕೆಗೆ ಹೊಸ ಅರ್ಥ ಸಿಕ್ಕಿದೆ: ಸಿ.ಟಿ. ರವಿ ವ್ಯಂಗ್ಯ

ಮಹಾರಾಷ್ಟ್ರದಲ್ಲಿ ಬಿಜೆಪಿ ಅಕ್ರಮವಾಗಿ ಅಧಿಕಾರಕ್ಕೆ ಬರುವ ಮೂಲಕ ಪ್ರಜಾಪ್ರಭುತ್ವದ ಆಶೋತ್ತರಗಳನ್ನು ಕೊಲೆ ಮಾಡಿದೆ. ಸಂವಿಧಾನದ ನಿಯಮಗಳನ್ನು ನಾಚಿಕೆಯಿಲ್ಲದೆ ಉಲ್ಲಂಘನೆ ಮಾಡುತ್ತಿದೆ. ಇದಕ್ಕೆ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

 Congress Sonia Gandhi Protest Maharashtra Issue Parliament

ಸಂಸತ್ ಕಲಾಪ ಆರಂಭವಾದ ಬಳಿಕ ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ವಿರೋಧಪಕ್ಷಗಳ ಸದಸ್ಯರು 'ಸಂವಿಧಾನದ ಹತ್ಯೆಯನ್ನು ನಿಲ್ಲಿಸಿ' ಎಂದು ಘೋಷಣೆಗಳನ್ನು ಕೂಗಿದರು. ರಾಜ್ಯಸಭೆಯಲ್ಲಿ ಕೂಡ ಮಹಾರಾಷ್ಟ್ರ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧಪಕ್ಷಗಳ ಸದಸ್ಯರು ಪ್ರತಿಭಟನಾ ಘೋಷಣೆಗಳನ್ನು ಕೂಗಿದರು. ಹೀಗಾಗಿ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12 ಹಾಗೂ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

English summary
Sonia Gandhi led the Congress protest against the formation of BJP-NCP government in Maharashtra and called it as murder of democracy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X