ಅಸಭ್ಯವಾಗಿ ವರ್ತಿಸಿದ್ದ ಮುಖಂಡರಿಗೆ ಮನ್ನಣೆ: ಕಾಂಗ್ರೆಸ್ ವಿರುದ್ಧ ಪ್ರಿಯಾಂಕಾ ಆಕ್ರೋಶ

ನವದೆಹಲಿ, ಏಪ್ರಿಲ್ 17: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದ ಪಕ್ಷದ ಕೆಲವು ಮುಖಂಡರನ್ನು ಪಕ್ಷಕ್ಕೆ ಮತ್ತೆ ಸೇರ್ಪಡೆ ಮಾಡಿಕೊಂಡಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ.

'ಪಕ್ಷಕ್ಕಾಗಿ ತಮ್ಮ ಬೆವರು ಮತ್ತು ರಕ್ತ ಹರಿಸಿದವರಿಗಿಂತಲೂ ಕಾಂಗ್ರೆಸ್‌ನಲ್ಲಿ ಕೊಳಕು ಗೂಂಡಾಗಳು ಮನ್ನಣೆ ಪಡೆದುಕೊಳ್ಳುತ್ತಿರುವುದು ತೀವ್ರ ದುಃಖಕರ' ಎಂದು ಪ್ರಿಯಾಂಕಾ ಚತುರ್ವೇದಿ ಪಕ್ಷದ ವಿರುದ್ಧ ಟ್ವಿಟ್ಟರ್‌ನಲ್ಲಿ ಕಿಡಿಕಾರಿದ್ದಾರೆ.

Congress Spokesperson Priyanka Chaturvedi unhappy at party reinstating leaders misbehaved with her

ಉತ್ತರ ಪ್ರದೇಶದಲ್ಲಿ ಪಕ್ಷದ ಕೆಲವು ಮುಖಂಡರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರಿಯಾಂಕಾ ಚತುರ್ವೇದಿ ನಾಯಕತ್ವಕ್ಕೆ ದೂರು ನೀಡಿದ್ದರು. ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಆದರೆ, ಕೆಲವು ದಿನಗಳಲ್ಲಿಯೇ ಆ ಮುಖಂಡರನ್ನು ಮರಳಿ ಅದೇ ಹುದ್ದೆಗಳಿಗೆ ಮರುನೇಮಿಸಿಕೊಳ್ಳಲಾಗಿದೆ.

ಉತ್ತರ ಪ್ರದೇಶ ಪೂರ್ವ ಭಾಗದ ಉಸ್ತುವಾರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಮಧ್ಯಪ್ರವೇಶದ ಬಳಿಕ ತಮ್ಮ ಮುಖಂಡರನ್ನು ಮರಳಿ ಸೇರ್ಪಡೆ ಮಾಡಲು ಉತ್ತರ ಪ್ರದೇಶ ಕಾಂಗ್ರೆಸ್ ನಿರ್ಧರಿಸಿತ್ತು.

ಮಥುರಾದಲ್ಲಿ ಕಾಂಗ್ರೆಸ್ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕೆಲವು ಮುಖಂಡರನ್ನು ಯುಪಿಸಿಸಿ ಮೊದಲು ಅಮಾನತು ಮಾಡಿತ್ತು. ಆದರೆ, ಕೆಲವು ದಿನಗಳಲ್ಲಿಯೇ ಮರಳಿ ಸೇರಿಸಿಕೊಂಡಿದೆ ಎಂದು ಪತ್ರಕರ್ತೆಯೊಬ್ಬರು ಟ್ವೀಟ್ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ, ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+