ಇಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಭರಪೂರ ಭರವಸೆ ನಿರೀಕ್ಷೆ

Recommended Video

      Lok Sabha Elections 2019 : ಇಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

      ನವದೆಹಲಿ, ಏಪ್ರಿಲ್ 02: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಮಂಗಳವಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ.

      ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಿಡುಗಡೆ ಮಾಡಲಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ.

      ಕಾಂಗ್ರೆಸ್ ಪ್ರಣಾಳಿಕೆ ಜನರ ಧ್ವನಿಯಾಗಿರಲಿದೆ, ಕೇವಲ ಒಬ್ಬ ವ್ಯಕ್ತಿಯ ದೃಷ್ಟಿಕೋನವಾಗಿಲ್ಲ ಎಂದು ಈ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್ ಗಾಂಧಿ ಟಾಂಗ್ ನೀಡಿದರು.

      Congress to release its manifesto for Lok Sabha elections 2019

      ಪ್ರಣಾಳಿಕೆಯ ಮುಖ್ಯ ಆದ್ಯತೆ ಉದ್ಯೋಗ ಸೃಷ್ಟಿ, ಶಿಕ್ಷಣ ಕ್ಷೇತ್ರದ ಸಬಲೀಕರಣ, ಆರೋಗ್ಯ ಮತ್ತು ಆರ್ಥಿಕ ಕ್ಷೇತ್ರಗಳಿಗೆ ಉತ್ತೇಜನ ನೀಡುವುದೇ ಆಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

      ದೇಶದ ಅಗತ್ಯಗಳನ್ನು ಅರಿತು ಈ ಪ್ರಣಾಳಿಕೆಯನ್ನು ತಯಾರಿಸಲಾಗಿದ್ದು, ದೇಶ ಎದುರಸುತ್ತಿರುವ ಎಲ್ಲಾ ಪ್ರಮುಖ ಸಮಸ್ಯೆಗಳಿಗೂ ಈ ಪ್ರಣಾಳಿಕೆಯಲ್ಲಿ ಪರಿಹಾರ ನೀಡಲಾಗಿದೆ ಎಂದು ಅವರು ಹೇಳಿದರು.

      ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಕಾರ್ಯನಿರ್ವಹಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+