ಭಗತ್ ಸಿಂಗ್, ರಾಜಗುರು, ಸುಖದೇವ್ ಅವರಿಗೆ ಭಾರತ ರತ್ನ ನೀಡಿ: ಕಾಂಗ್ರೆಸ್
ನವದೆಹಲಿ, ಅಕ್ಟೋಬರ್ 26: ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರಿಗೆ ಭಾರತ ರತ್ನದ ಗೌರವ ನೀಡಬೇಕು ಎಂದ ಕಾಂಗ್ರೆಸ್ ಒತ್ತಾಯಿಸಿದೆ.
ಸಾವರ್ಕರ್ಗೆ ಭಾರತ ರತ್ನ: ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ
ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದು, 2020 ರ ಜನವರಿ 26, ಗಣರಾಜ್ಯೋತ್ಸವದಂದು ಕೊಡಮಾಡುವ ಭಾರತ ರತ್ನವನ್ನು ಭಗತ್ ಸಿಂಗ್, ರಾಜ್ ಗುರು, ಸುಖದೇವ್ ಅವರಿಗೆ ನೀಡಿ ಎಂದಿದ್ದಾರೆ.
ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಈ ಮೂವರು ನೀಡುವ ಕೊಡುಗೆ ಅಪಾರ. ಅದನ್ನು ಪರಿಗಣಿಸಿ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
'ನಾವು ಸಾವರ್ಕರ್ ವಿರೋಧಿಯಲ್ಲ, ಆದರೆ...' ಮೌನ ಮುರಿದ ಮನಮೋಹನ್ ಸಿಂಗ್
ಇತ್ತೀಚೆಗಷ್ಟೇ ಬಿಜೆಪಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ವಸ್ವಾತಂತ್ರ್ಯ ಹೋರಾಟಗಾರ ವಿನಾಯಕ್ ದಾಮೋದರ್ ಸಾವರ್ಕರ್ ಅವರಿಗೂ ಭಾರತ ರತ್ನ ನೀಡುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.