ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಪ್ರಾರಂಭ: ರಾಹುಲ್ ರಾಜೀನಾಮೆ ಹೇಳಿಕೆ

|
Google Oneindia Kannada News

ನವದೆಹಲಿ, ಮೇ 25: ಕಾಂಗ್ರೆಸ್‌ ಪಕ್ಷದ ಕಾರ್ಯಕಾರಿಣಿ ಸಭೆಯು ನವದೆಹಯಲ್ಲಿ ಪ್ರಾರಂಭವಾಗಿದ್ದು, ರಾಹುಲ್ ಗಾಂಧಿ ಅವರ ರಾಜೀನಾಮೆ ವಿಷಯವಾಗಿ ಚರ್ಚೆ ನಡೆಯಲಿದೆ.

ಕಾರ್ಯಕಾರಿಣಿ ಸಭೆಯಲ್ಲಿ ವಿವಿಧ ರಾಜ್ಯಗಳ ಕಾಂಗ್ರೆಸ್ ಪ್ರಮುಖರು ಭಾಗವಹಿಸಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ರಾಹುಲ್ ಹೇಳಿದ್ದು ಹೀಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ರಾಹುಲ್ ಹೇಳಿದ್ದು ಹೀಗೆ

ರಾಜ್ಯದಿಂದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ, ದಿನೇಶ್ ಗುಂಡೂರಾವ್ ಅವರು ಸಭೆಯಲ್ಲಿ ಭಾಗವಹಿಸಿದ್ದಾರೆ. ಸಭೆಯಲ್ಲಿ ರಾಜ್ಯದ ರಾಜಕಾರಣದ ವಿಷಯವೂ ಚರ್ಚೆ ಆಗಲಿದೆ.

Congress working committee meeting starts today in New Delhi

ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಪ್ರಮುಖವಾಗಿ ಚರ್ಚೆ ಆಗಲಿದೆ. ಆದರೆ ರಾಹುಲ್ ಗಾಂಧಿ ರಾಜೀನಾಮೆ ಪ್ರಸ್ತಾಪವನ್ನು ಸಭೆಯು ಅಲ್ಲಗಳೆಯುತ್ತದೆ ಎಂದೇ ಹೇಳಲಾಗುತ್ತಿದೆ.

ನಾಳೆ ಕಾರ್ಯಕಾರಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ಕುರಿತು ಚರ್ಚೆ? ನಾಳೆ ಕಾರ್ಯಕಾರಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ಕುರಿತು ಚರ್ಚೆ?

ಆದರೆ ಕಾಂಗ್ರೆಸ್‌ನಲ್ಲಿ ಹಲವರಿಗೆ ರಾಹುಲ್ ಗಾಂಧಿ ಅವರ ನಾಯಕತ್ವದ ಮೇಲೆ ವಿಶ್ವಾಸ ಹೋಗಿದ್ದು, ಪಕ್ಷದ ಒಳಗಡೆಯೇ ರಾಹುಲ್ ಅವರ ರಾಜೀನಾಮೆಗೆ ಒತ್ತಡ ಇದೆ ಎನ್ನಲಾಗುತ್ತಿದೆ.

Congress working committee meeting starts today in New Delhi

ಸಭೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದ್ದು, ಎಲ್ಲ ರಾಜ್ಯಗಳವರೂ ಸಹ ಸೋಲಿಗೆ ಕಾರಣಗಳನ್ನು ವಿವರಿಸಲಿದ್ದಾರೆ. ರಾಜ್ಯ ನಾಯಕರೂ ಸಹ ಚರ್ಚೆಯಲ್ಲಿ ಭಾಗವಹಿಸಿದ್ದು, ರಾಜ್ಯದ ಸೋಲಿನ ಕುರಿತು ವರದಿ ಸಲ್ಲಿಸಲಿದ್ದಾರೆ.

ರಾಜ್ಯದ ಮೈತ್ರಿ ಸರ್ಕಾರದ ಭವಿಷ್ಯ ಸಹ ಇಂದು ನಿಶ್ಚಯ ಆಗಲಿದೆ ಎನ್ನಲಾಗಿದ್ದು, ರಾಜ್ಯದಲ್ಲಿ ಮೈತ್ರಿ ಮುಂದುವರೆಯಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಇಂದು ಕಾರ್ಯಕಾರಿಣಿಯಲ್ಲಿಯೇ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ.

English summary
Congress working committee meeting starts at Delhi today. In meeting expected to discuss about Rahul Gandhi resignation. Siddaramaiah, Mallikarjun Kharge, KH Muniyappa, Dinesh Gundu Rao participated in meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X