ದೆಹಲಿಯಲ್ಲಿ ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
ನವದೆಹಲಿ, ಆಗಸ್ಟ್ 27: ದೆಹಲಿಯಲ್ಲಿ ದಿನನಿತ್ಯ ಕೊರೊನಾ ಪರೀಕ್ಷೆಯೂ ಕೂಡ ಹೆಚ್ಚಾಗುತ್ತಿದ್ದು, ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಪರೀಕ್ಷೆಗಳು ಹೆಚ್ಚಾದಂತೆ ಬಹುಬೇಗ ಕೊರೊನಾ ಸೋಂಕಿತರನ್ನು ಪತ್ತೆ ಮಾಡಲು ಸಹಾಯವಾಗುತ್ತದೆ. ಹೀಗಾಗಿ ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಈ ಕುರಿತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. ದಹಲಿಯಲ್ಲಿ ಮುಂದಿನ ದಿನಗಳಲ್ಲಿ ಪರೀಕ್ಷೆಯನ್ನು ದುಪ್ಪಟ್ಟು ಮಾಡಲಾಗುತ್ತದೆ. ದಹಲಿಯಲ್ಲಿ ಇಂದು 716 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಮುಂದಿನ ಒಂದು ವಾರದೊಳಗೆ ದೆಹಲಿಯಲ್ಲಿ ನಿತ್ಯ 40 ಸಾವಿರ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ದಹಲಿಯಲ್ಲಿ ಆಗಸ್ಟ್ 1 ರಂದು 539 ಕಂಟೈನ್ಮೆಂಟ್ ಝೋನ್‌ಗಳಿದ್ದವು ಆಗಸ್ಟ್ 27ರ ವೇಳೆಗೆ 716 ಕಂಟೈನ್ಮೆಂಟ್ ಝೋನ್‌ಗಳಿವೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲೇ 75760 ಜನರಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಕೊರೊನಾವೈರಸ್ ಸೋಂಕಿಗೆ ಒಂದೇ ದಿನ 1023 ಸೋಂಕಿತರು ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 60472ಕ್ಕೆ ಏರಿಕೆಯಾಗಿದೆ. ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 3310235ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಒಟ್ಟು 3310235 ಕೊರೊನಾವೈರಸ್ ಸೋಂಕಿತ ಪ್ರಕರಣ ಪೈಕಿ 25,23,772 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,25,991 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications