ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿವಾದಾತ್ಮಕ ಹೇಳಿಕೆ ಪ್ರಕರಣ: ನೂಪುರ್ ಬಂಧನಕ್ಕೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

|
Google Oneindia Kannada News

ಹೊಸದಿಲ್ಲಿ ಸೆಪ್ಟೆಂಬರ್ 9: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ್ದು, ಬಿಜೆಪಿಯ ಮಾಜಿ ನಾಯಕಿ ವಿರುದ್ಧ ನ್ಯಾಯಾಲಯ ಕ್ರಮ ಕೈಗೊಂಡು ಅವರನ್ನು ಬಂಧಿಸಲು ಆದೇಶಿಸಬೇಕು ಎಂದು ಅರ್ಜಿದಾರರು ಈ ಅರ್ಜಿಯಲ್ಲಿ ಕೋರಿದ್ದರು. ಇದಕ್ಕೂ ಮೊದಲು, ದೇಶದ ವಿವಿಧ ರಾಜ್ಯಗಳಲ್ಲಿ ನೂಪುರ್ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರ ಎಫ್‌ಐಆರ್‌ನೊಂದಿಗೆ ಸಂಯೋಜಿಸಿತು.

ಶುಕ್ರವಾರ ನಡೆದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ ಅರ್ಜಿದಾರರಿಗೆ ಅರ್ಜಿಯನ್ನು ಹಿಂಪಡೆಯುವಂತೆ ಸೂಚಿಸಿತು. ಇದು ಹಾನಿಕಾರಕವೆಂದು ತೋರುತ್ತಿಲ್ಲ, ಆದರೆ ಇದು ದೂರಗಾಮಿ ಪರಿಣಾಮಗಳನ್ನು ಹೊಂದಿದೆ ಎಂದು ಪೀಠ ಹೇಳಿದೆ. ಈ ಅರ್ಜಿಯನ್ನು ಹಿಂಪಡೆಯುವಂತೆ ನಾವು ಸೂಚಿಸುತ್ತೇವೆ ಎಂದಿದೆ.

ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯ ಯಾಕೆ?

ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯ ಯಾಕೆ?

ಬಿಜೆಪಿಯ ಆಗಿನ ವಕ್ತಾರರಾಗಿದ್ದ ನೂಪುರ್ ಶರ್ಮಾ ಅವರು ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಕಾಮೆಂಟ್ ಮಾಡುವ ಮೂಲಕ ದೊಡ್ಡ ಗದ್ದಲಕ್ಕೆ ಕಾರಣರಾಗಿದ್ದರು. ಅವರು ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ದೇಶ ವಿದೇಶದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಶರ್ಮಾ ಅವರನ್ನು ಬಂಧಿಸಬೇಕು ಜೊತೆಗೆ ಕ್ರಮ ಕೈಗೊಳ್ಳಬೇಕು ಎನ್ನುವ ಒತ್ತಾಯಗಳನ್ನು ಹೇರಲಾಗಿತ್ತು. ಮುಸ್ಲಿಂ ದೇಶಗಳು ಸೇರಿದಂತೆ ದೇಶದ ಹಲವೆಡೆ ನೂಪುರ್ ಬಂಧಿಸುವಂತೆ ಪ್ರತಿಭಟನೆ ಮಾಡಲಾಯಿತು. ಭಾರತದಲ್ಲಿ ತೀವ್ರಗೊಂಡ ಪ್ರತಿಭಟನೆಯಲ್ಲಿ ಸಾವು ನೋವುಗಳು ಸಂಭವಿಸಿವೆ. ಇಂದಿಗೂ ಈ ಘಟನೆ ಬೂದಿ ಮುಚ್ಚಿದ ಕೆಂಡದಂತಿದೆ. ನೂಪುರ್ ಶರ್ಮಾ ಪರ ಯಾರೇ ಮಾತನಾಡಿದರೂ ಅವರಿಗೆ ಬೆದರಿಕೆ ಕರೆಗಳು ಬರುತ್ತಿರುವುದು ಕೊಲೆಯಾಗಿರುವ ಪ್ರಕರಣ ಕೂಡ ಬೆಳಕಿಗೆ ಬಂದಿದೆ. ಆದರೆ ನೂಪುರ್ ಶರ್ಮಾ ಅವರನ್ನು ಬಂಧಿಸಲಾಗಿಲ್ಲ. ಅವರ ವಿರುದ್ಧ ಹಲವೆಡೆ ಪ್ರಕರಣಗಳನ್ನು ದಾಖಲಿಸಲಾಗಿದ್ದು ಶರ್ಮಾ ಅವರ ವಿಚಾರಣೆ ಕೂಡ ನಡೆಯುತ್ತಿದೆ.

ಕನ್ಹಯ್ಯಲಾಲ್ ಹತ್ಯೆ

ಕನ್ಹಯ್ಯಲಾಲ್ ಹತ್ಯೆ

ಪ್ರವಾದಿ ವಿರುದ್ಧ ಹೇಳಿಕೆ ನೀಡಿದ ಬಳಿಕ ನೂಪುರ್ ಶರ್ಮಾ ಪರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಉದಯಪುರ ಟೇಲರ್ ಕನ್ಹಯ್ಯ ಲಾಲ್ ಅವರನ್ನು ಹಂತಕರು ಕೊಚ್ಚಿ ಕೊಲೆ ಮಾಡಿದ್ದರು. ಈ ವಿಕೃತಿಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಮಾತ್ರವಲ್ಲದೇ ಪ್ರಧಾನಿ ಮೋದಿ ಅವರಿಗೂ ಬೆದರಿಕೆ ಹಾಕಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಜನ ಬೀದಿಗಿಳಿದು ತೀವ್ರ ವಿರೋಧ ವ್ಯಕ್ತಪಡಿಸಿದರು. ಹಂತಕರನ್ನು ಬಂಧಿಸುವಂತೆ ಒತ್ತಾಯ ಹೆಚ್ಚಾಗುತ್ತಿದ್ದಂತೆ ಹಂತಕರ ವಿಡಿಯೋ ಆಧಾರದ ಮೇಲೆ ಇಬ್ಬರನ್ನು ಪೊಲೀಸರ ಬಂಧಿಸಿದ್ದರು. ಅವರ ವಿಚಾರಣೆ ಕೂಡ ನ್ಯಾಯಾಲಯದಲ್ಲಿದೆ.

ಬೂದಿ ಮುಚ್ಚಿದ ಕೆಂಡದಂತ ಪರಿಸ್ಥಿತಿ

ಬೂದಿ ಮುಚ್ಚಿದ ಕೆಂಡದಂತ ಪರಿಸ್ಥಿತಿ

ಉಭಯ ದೇಶಗಳು ಗಲ್ಫ್ ಪ್ರದೇಶದ ಸೌದಿ ಅರೇಬಿಯಾ, ಕತಾರ್, ಬಹ್ರೇನ್ ಮತ್ತು ಇರಾನ್ ದೇಶಗಳು ನೂಪುರ್ ಶರ್ಮಾ ಟೀಕೆಗಳನ್ನು ಬಲವಾಗಿ ಖಂಡಿಸಿವೆ. ಕತಾರ್ ಮತ್ತು ಬಹ್ರೇನ್ ಕೂಡ ಭಾರತೀಯ ರಾಯಭಾರಿಯನ್ನು ಕರೆಸಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿವೆ. ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಲಾಯಿತು. ಬಿಜೆಪಿಯ ಕ್ರಮವನ್ನು ಉಭಯ ದೇಶಗಳು ಸ್ವಾಗತಿಸಿವೆ. ಆದರೂ ಈ ವಿಚಾರ ಬೂದಿ ಮುಚ್ಚಿದ ಕೆಂಡದಂತಿರುವುದು ಸುಳ್ಳಲ್ಲ ಎನ್ನುವುದಕ್ಕೆ ಬೆದರಿಕೆ ಕರೆಗಳೇ ಸಾಕ್ಷಿ.

ಸುಪ್ರೀಂ ಕೋರ್ಟ್ ತರಾಟೆ

ಸುಪ್ರೀಂ ಕೋರ್ಟ್ ತರಾಟೆ

ಜುಲೈ 1 ರಂದು, ಪ್ರವಾದಿ ವಿರುದ್ಧದ ವಿವಾದಾತ್ಮಕ ಕಾಮೆಂಟ್‌ಗಳಿಗಾಗಿ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಟೀಕಿಸಿತು, ಅವರ "ಸಡಿಲವಾದ ನಾಲಿಗೆ" "ಇಡೀ ದೇಶಕ್ಕೆ ಬೆಂಕಿ ಹಚ್ಚಿದೆ" ಮತ್ತು "ದೇಶದಲ್ಲಿ ಏನಾಗುತ್ತಿದೆ ಎಂಬುದಕ್ಕೆ ಅವರು ಒಬ್ಬಂಟಿಯಾಗಿ ಹೊಣೆಗಾರಳು" ಎಂದು ನ್ಯಾಯಾಲಯ ಹೇಳಿದೆ. ಈ ಹೇಳಿಕೆಗಾಗಿ ತನ್ನ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ಕ್ಲಬ್‌ಗೆ ಸೇರಿಸಲು ಶರ್ಮಾ ಮಾಡಿದ ಮನವಿಯನ್ನು ಪರಿಗಣಿಸಲು ನಿರಾಕರಿಸಿದ ಪೀಠ, ಅಗ್ಗದ ಪ್ರಚಾರ, ರಾಜಕೀಯ ಅಜೆಂಡಾ ಅಥವಾ ಕೆಲವು ಕೆಟ್ಟ ಚಟುವಟಿಕೆಗಳಿಗಾಗಿ ಕಾಮೆಂಟ್ ಮಾಡಲಾಗಿದೆ ಎಂದು ಹೇಳಿದೆ.

ಶರ್ಮಾ ವಿರುದ್ಧ ದೆಹಲಿ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಕರ್ನಾಟಕ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಅಸ್ಸಾಂನಲ್ಲಿ ಎಫ್‌ಐಆರ್‌ ದಾಖಲಾಗಿವೆ. ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸುವಂತೆ ನೂಪುರ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನೂಪುರ್ ಶರ್ಮಾ ಅವರಿಗೆ ಬೆದರಿಕೆಗಳು ಬರುತ್ತಿವೆ ಅಥವಾ ಅವರೇ ಭದ್ರತೆಗೆ ಬೆದರಿಕೆಯಾಗಿದ್ದಾರೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದರು.

English summary
The Supreme Court on Friday refused to hear a petition filed against former BJP spokesperson Nupur Sharma.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X