ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಸುನಾಮಿಯೇ ಎದುರಾಗಲಿದೆ; ಚಿದಂಬರಂ ಎಚ್ಚರಿಕೆ

|
Google Oneindia Kannada News

ನವದೆಹಲಿ, ಏಪ್ರಿಲ್ 8: ದೇಶದಲ್ಲಿ ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಿದ್ದು, ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಕೇಂದ್ರ ಸರ್ಕಾರ ಈ ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಿಸದಿರುವುದೇ ಇರುವುದೇ ಇದಕ್ಕೆ ಕಾರಣ ಎಂದು ದೂರಿರುವ ಕಾಂಗ್ರೆಸ್ ಮುಖಂಡ ಚಿದಂಬರಂ ಅವರು, ಪರಿಸ್ಥಿತಿ ಹೀಗೇ ಮುಂದುವರೆದರೆ ಕೊರೊನಾ ಸುನಾಮಿಯೇ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಸೋಂಕಿನ ನಿರ್ವಹಣೆ ಕುರಿತು ಕೇಂದ್ರದ ಕಾರ್ಯಚಟುವಟಿಕೆಗಳಲ್ಲಿ ಹಲವು ದೋಷಗಳಿವೆ. ಅದರಲ್ಲೂ ಕೊರೊನಾ ಲಸಿಕೆ ನಿರ್ವಹಣೆಯಲ್ಲಿ ಕೇಂದ್ರ ಸೋತಿದೆ. ಹಲವು ರಾಜ್ಯಗಳಲ್ಲಿ ಲಸಿಕೆಗಳ ಕೊರತೆ ಉಂಟಾಗಿದೆ ಎಂದು ದೂರಿದ್ದಾರೆ.

ತಮಿಳುನಾಡಿನಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ ಬಗ್ಗೆ ಚಿದಂಬರಂ ಪ್ರಶ್ನೆತಮಿಳುನಾಡಿನಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ ಬಗ್ಗೆ ಚಿದಂಬರಂ ಪ್ರಶ್ನೆ

ಅವೈಜ್ಞಾನಿಕ ಹಾಗೂ ಹಟಮಾರಿ ನಿಲುವಿನಿಂದ ದೇಶದಲ್ಲಿ ಪ್ರತಿದಿನ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚುತ್ತಿದೆ. ದೇಶದಲ್ಲಿ ಭೀಕರ ಪರಿಸ್ಥಿತಿ ಉಂಟಾಗಲಿದೆ. ಬಿಜೆಪಿಯ ಇಂಥ ನೀತಿಗಳಿಂದಾಗಿ ಜನರು ಬಹುದೊಡ್ಡ ಬೆಲೆ ತೆರುತ್ತಿದ್ದಾರೆ ಎಂದು ಚಿದಂಬರಂ ಟೀಕಿಸಿದ್ದಾರೆ.

 Corona Situation Could Turn Into Tsunami If Not Dealt With Properly Warns P Chidambaram

ಭಾರತೀಯ ವೈದ್ಯಕೀಯ ಸಂಸ್ಥೆ ಹಾಗೂ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಎಲ್ಲರಿಗೂ ಲಸಿಕೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಆದರೆ ಕೇಂದ್ರ ಅದನ್ನು ತಿರಸ್ಕರಿಸಿದೆ. ಸದ್ಯಕ್ಕೆ ಎಲ್ಲ ವಯೋಮಾನದವರಿಗೂ ಲಸಿಕೆ ನೀಡುವ ಅವಶ್ಯಕತೆಯಿದೆ ಎಂದು ವಾದಿಸಿರುವ ಅವರು, ಹೊಸ ಕೊರೊನಾ ಲಸಿಕೆಗಳ ಅನುಮೋದನೆಗೆ ತಡ ಮಾಡುತ್ತಿರುವ ಕುರಿತು ಪ್ರಶ್ನಿಸಿದ್ದಾರೆ.

ಜಗತ್ತಿನೆಲ್ಲೆಡೆ ಬಳಕೆಗೆ ಅನುಮೋದನೆ ಪಡೆದಿರುವ ಲಸಿಕೆಗಳನ್ನು ಭಾರತದಲ್ಲಿ ಅನುಮೋದನೆಗೆ ತಡೆ ಹಿಡಿಯಲಾಗುತ್ತಿದೆ. ಇದರಿಂದಲೇ ಲಸಿಕೆಗಳ ಕೊರತೆ ಉಂಟಾಗಿದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೂಡ ದೂರಿದ್ದಾರೆ.

English summary
Congress leader P Chidambaram slams BJP government accusing it mishandling the second wave of Covid-19 infections in country and warned that the situation could turn into a tsunami if not dealt with properly
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X