ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

50 ವರ್ಷ ಮೇಲ್ಪಟ್ಟವರಿಗೂ ಶೀಘ್ರವೇ ಕೊರೊನಾ ಲಸಿಕೆ; ಆರೋಗ್ಯ ಸಚಿವ

|
Google Oneindia Kannada News

ನವದೆಹಲಿ, ಫೆಬ್ರುವರಿ 06: ಜನವರಿ 16ರಿಂದ ಭಾರತದಾದ್ಯಂತ ಕೊರೊನಾ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ ಆದ್ಯತೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಗಳನ್ನು ನೀಡಲಾಗುತ್ತಿದೆ.

ಇದೀಗ ಮೂರನೇ ಆದ್ಯತಾ ಗುಂಪಿಗೆ ಲಸಿಕೆ ನೀಡಲು ತಯಾರಿ ನಡೆಸುತ್ತಿದ್ದು, ಶೀಘ್ರವೇ ಐವತ್ತು ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಭರವಸೆ ನೀಡಿದ್ದಾರೆ.

ಭಾರತಕ್ಕೆ ಶೀಘ್ರ 2 ಕೊರೊನಾ ಲಸಿಕೆಗಳು ಲಭ್ಯವಾಗುವ ಸಾಧ್ಯತೆ ಭಾರತಕ್ಕೆ ಶೀಘ್ರ 2 ಕೊರೊನಾ ಲಸಿಕೆಗಳು ಲಭ್ಯವಾಗುವ ಸಾಧ್ಯತೆ

ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನದಲ್ಲಿ ಐವತ್ತು ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದ್ದು, ಈ ಹಂತದಲ್ಲಿ ಸುಮಾರು 27 ಕೋಟಿ ಜನರಿಗೆ ಲಸಿಕೆ ನೀಡಲಾಗುವುದು. ಇದೇ ಮಾರ್ಚ್ ತಿಂಗಳಿನಲ್ಲಿ ಲಸಿಕೆ ನೀಡಲು ಆರಂಭಿಸಲಾಗುತ್ತದೆ ಎಂದು ಹರ್ಷವರ್ಧನ್ ಲೋಕಸಭೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

Corona Vaccination Above 50 Years Age Will Start From March

"ಲಸಿಕಾ ಅಭಿಯಾನದ ಮೊದಲ ಹಂತದಲ್ಲಿ ಸರ್ಕಾರಿ ಹಾಗೂ ಖಾಸಗಿಯ ಸುಮಾರು ಒಂದು ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವ ಯೋಜನೆಯಿತ್ತು. ಸದ್ಯಕ್ಕೆ ಆ ಯೋಜನೆ ಕಾರ್ಯಗತಗೊಳ್ಳುತ್ತಿದೆ. ಎರಡನೇ ಹಂತದಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು, ಸುಮಾರು 2 ಕೋಟಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ. ಫೆಬ್ರುವರಿ 2ರಿಂದಲೇ ಎರಡನೇ ಹಂತದ ಲಸಿಕಾ ಅಭಿಯಾನ ಆರಂಭಗೊಂಡಿದೆ. ಮುಂದಿನ ಹಂತದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಮಾರ್ಚ್ ನಲ್ಲಿ ಇವರಿಗೆ ಲಸಿಕಾ ಅಭಿಯಾನ ಆರಂಭಗೊಳ್ಳುತ್ತದೆ" ಎಂದು ಮಾಹಿತಿ ನೀಡಿದ್ದಾರೆ.

ಆದರೆ ಈ ಬಗ್ಗೆ ನಿಖರ ದಿನಾಂಕ ನೀಡಲು ಸಾಧ್ಯವಿಲ್ಲ. ಮಾರ್ಚ್ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ಲಸಿಕೆ ನೀಡಲಾಗುವುದು. ಭಾರತದಲ್ಲಿ ಇದುವರೆಗೂ ಐದು ಮಿಲಿಯನ್ ಜನರಿಗೆ ಲಸಿಕೆಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

English summary
Vaccination to third priority group of those who are above 50 years of age will begin in march, informed health minister Harsha vardhan,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X