ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ 9 ಜಿಲ್ಲೆಗಳು ಸೇರಿ ಭಾರತದ 75 ಜಿಲ್ಲೆಗಳ ಲಾಕ್!

|
Google Oneindia Kannada News

ನವದೆಹಲಿ, ಮಾರ್ಚ್.22: ಕೊರೊನಾ ವೈರಸ್ ಹರಡುವುದಕ್ಕೆ ಕಡಿವಾಣ ಹಾಕಲು ಪ್ರಧಾನಮಂತ್ರಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದು ಆಗಿದೆ. ಭಾನುವಾರ ಇಡೀ ಭಾರತಕ್ಕೆ ಭಾರತವೇ ಸ್ತಬ್ಧವಾಗಿದೆ. ಇದರ ನಡುವೆ ಮತ್ತೊಂದು ಆಘಾತಕಾರಿ ಆದೇಶ ಹೊರ ಬಿದ್ದಿದೆ.

ಕೊರೊನಾ ವೈರಸ್ ಸೋಂಕಿತರು ಮತ್ತು ಶಂಕಿತರು ಕಾಣಿಸಿಕೊಂಡ ದೇಶದ 75 ಜಿಲ್ಲೆಗಳನ್ನು ಮುಂದಿನ ಹತ್ತು ದಿನಗಳ ಕಾಲ ಸಂಪೂರ್ಣವಾಗಿ ಲಾಕ್ ಡೌನ್ ಮಾಡಲು ಕೇಂದ್ರ ಸರ್ಕಾರವು ತೀರ್ಮಾನಿಸಿದೆ. ಈ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ.

Coronavirus Janta Curfew Live Updates: ಭಾರತದಲ್ಲಿ ಕೊರೊನಾ ಸಾವಿನ ಸಂಖ್ಯೆ 7ಕ್ಕೆ ಏರಿಕೆCoronavirus Janta Curfew Live Updates: ಭಾರತದಲ್ಲಿ ಕೊರೊನಾ ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳನ್ನು ಮಾರ್ಚ್.31ರವರೆಗೂ ಲಾಕ್ ಡೌನ್ ಮಾಡುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Coronavirus: 75 Districts Complete Lockdown Till March.31 In India

ಕರ್ನಾಟಕದ ಯಾವ ಜಿಲ್ಲೆಗಳು ಲಾಕ್ ಡೌನ್:

ರಾಜ್ಯದಲ್ಲಿ ಅತಿಹೆಚ್ಚು ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗಿರುವ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳನ್ನು 10 ದಿನಗಳ ಕಾಲ ಸ್ತಬ್ಧಗೊಳಿಸಲು ಸರ್ಕಾರವು ಮುಂದಾಗಿದೆ. ಇದರ ಜೊತೆಗೆ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕಲಬುರಗಿ, ಧಾರವಾಡ, ಚಿಕ್ಕಬಳ್ಳಾಪುರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲಾಗುತ್ತದೆ.

ಕೊರೊನಾ ಪೀಡಿತ ಎಂದು ಪತ್ರಕರ್ತನ ಫೋಟೊ ಹರಿಬಿಟ್ಟ ಕಿಡಗೇಡಿಗಳುಕೊರೊನಾ ಪೀಡಿತ ಎಂದು ಪತ್ರಕರ್ತನ ಫೋಟೊ ಹರಿಬಿಟ್ಟ ಕಿಡಗೇಡಿಗಳು

ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ:

ಇನ್ನು, ದೇಶದ 75 ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವ ನಿಟ್ಟಿನಲ್ಲಿ ಆದೇಶವನ್ನು ಹೊರಡಿಸಲಾಗಿದೆ. ಆದರೆ, ಅಗತ್ಯ ವಸ್ತುಗಳಾದ ಹಣ್ಣು-ತರಕಾರಿ, ಮೆಡಿಕಲ್ ಶಾಪ್, ಪೆಟ್ರೋಲ್-ಡೀಸೆಲ್, ಹೋಟೆಲ್ ಹಾಗೂ ಆಹಾರ ಸಾಮಗ್ರಿಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

English summary
Coronavirus: 75 Districts Complete Lockdown Till March.31 In India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X