• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಾರತದ ಯಾವ ರಾಜ್ಯದಲ್ಲಿ ಎಷ್ಟು ಮಂದಿ ಕೊರೊನಾ ಸೋಂಕಿತರು?

|

ನವದೆಹಲಿ, ಮಾರ್ಚ್.22: ಚೀನಾದಲ್ಲಿ ಮೊದಲು ಜನ್ಮ ತಾಳಿದ ಕೊರೊನಾ ವೈರಸ್ ಡ್ರ್ಯಾಗನ್ ರಾಷ್ಟ್ರದಲ್ಲಿ ಸೈಲೆಂಟ್ ಆಗಿದ್ರೂ ವಿದೇಶಗಳಲ್ಲಿಯೇ ಹೆಚ್ಚು ಅಬ್ಬರಿಸುತ್ತಿದೆ. ಭಾರತದಲ್ಲೂ ಸೋಂಕಿತರ ಸಂಖ್ಯೆಯು ದಿನೇ ದಿನೆ ಏರಿಕೆಯಾಗುತ್ತಿದೆ.

ಶನಿವಾರದ ಅಂಕಿ-ಅಂಶಗಳ ಪ್ರಕಾರ ಜಗತ್ತಿನಾದ್ಯಂತ 13,642 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆಯು 3 ಲಕ್ಷದ ಗಡಿ ದಾಟಿದ್ದು, 3,17,298 ಜನರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಇದುವರೆಗೂ 95,949 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಕೊರೊನಾ ವಿರುದ್ಧ ಯುದ್ಧ; ಭಾರತಕ್ಕೆ ವರವಾಗುತ್ತಾ 102 ವರ್ಷಗಳ ಅನುಭವ?

ಇನ್ನು, ಭಾರತದ ಮಟ್ಟಿಗೆ ಅಂಕಿ-ಅಂಶಗಳನ್ನು ನೋಡುವುದಾದರೆ ಎಂಟು ಮಂದಿ ಕೊರೊನಾ ವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಸೋಂಕಿತರ ಸಂಖ್ಯೆಯು 360ರ ಗಡಿ ದಾಟಿದ್ದು, ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕಿತರು ಕಂಡು ಬಂದ 75 ಜಿಲ್ಲೆಗಳನ್ನು ಸಂಪೂರ್ಣ ಲಾಕ್ ಔಟ್ ಮಾಡುವುದಾಗಿ ಘೋಷಿಸಿದೆ. ಹಾಗಿದ್ದಲ್ಲಿ ಇಂದಿನ ಮಟ್ಟಿಗೆ ದೇಶದ ಯಾವ ರಾಜ್ಯದಲ್ಲಿ ಎಷ್ಟು ಮಂದಿ ಸೋಂಕಿತರು ಇದ್ದಾರೆ ಎಂಬುದರ ಪಟ್ಟಿ ಇಲ್ಲಿದೆ ನೋಡಿ.

ರಾಜ್ಯ ಮತ್ತು ಸೋಂಕಿತರ ಸಂಖ್ಯೆ:

- ಮಹಾರಾಷ್ಟ್ರದಲ್ಲಿ ಮೂವರು ಸೋಂಕಿತರು ಸೇರಿ 60 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ.

- ಕೇರಳದಲ್ಲಿ 45 ಮಂದಿಗೆ ಸೋಂಕು ಪತ್ತೆಯಾಗಿದ್ದು, ಏಳು ಮಂದಿ ವಿದೇಶಿಗರಾಗಿದ್ದು, ಮೂವರ ಆರೋಗ್ಯದಲ್ಲಿ ಚೇತರಿಕೆ ಕಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

- ರಾಜಸ್ಥಾನದಲ್ಲಿ 22 ಮಂದಿಗೆ ಸೋಂಕು ತಗಲಿದ್ದು, ಈ ಪೈಕಿ ಇಬ್ಬರು ವಿದೇಶಿಗರಾಗಿದ್ದಾರೆ. ಮೂರು ಸೋಂಕಿತರು ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

- ಕರ್ನಾಟಕದಲ್ಲಿ 26 ಮಂದಿಗೆ ಸೋಂಕು ಇರುವುದು ಪತ್ತೆಯಾಗಿದ್ದು, ಒಬ್ಬ ವ್ಯಕ್ತಿ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾನೆ.

- ಉತ್ತರ ಪ್ರದೇಶದಲ್ಲಿ 25 ಮಂದಿ ಸೋಂಕು ಇರುವುದು ದೃಢಪಟ್ಟಿದ್ದು, ಒಬ್ಬ ವಿದೇಶಿಗ ಎನ್ನಲಾಗಿದೆ. ಇದುವರೆಗೂ 9 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

- ಪಶ್ಚಿಮ ಬಂಗಾಳದಲ್ಲಿ ನಾಲ್ವರಿಗೆ ಸೋಂಕು ಇರುವುದು ದೃಢಪಟ್ಟಿದೆ.

- ಗುಜರಾತ್ ನಲ್ಲಿ 14 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ.

- ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಹೊಸ ಸೋಂಕಿತ ಪ್ರಕರಣ ಪತ್ತೆಯಾಗಿದ್ದು, ಇದುವರೆಗೂ ರಾಜ್ಯದಲ್ಲಿ ಮೂವರಿಗೆ ಸೋಂಕು ಇರುವುದು ದೃಢಪಟ್ಟಿದೆ.

- ಉತ್ತರಾಖಂಡದಲ್ಲಿ ಮೂವರಿಗೆ ಸೋಂಕು ಇರುವುದು ಖಚಿತವಾಗಿದೆ.

- ಪಂಜಾಬ್ ನಲ್ಲಿ 13 ಮಂದಿಗೆ ಸೋಂಕು ತಗಲಿದ್ದು, ಒಬ್ಬ ವ್ಯಕ್ತಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾನೆ.

- ಒಡಿಶಾದಲ್ಲಿ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ಇರುವುದು ಸ್ಪಷ್ಟವಾಗಿದೆ.

- ತೆಲಂಗಾಣದಲ್ಲಿ 21 ಮಂದಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಒಬ್ಬನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

English summary
Coronavirus Infected And Death Cases In India Till March.22.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X