• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ; ಉದ್ಯೋಗಿಗಳ ಹಾಜರಾತಿ ಬಗ್ಗೆ ಕೇಂದ್ರದ ಮಹತ್ವದ ನಿರ್ಧಾರ

|

ನವದೆಹಲಿ, ಮಾರ್ಚ್ 6: ಕೊರೊನಾ ವೈರಸ್ ಸೋಂಕಿನ ಭಯದ ಹಿನ್ನೆಲೆಯಲ್ಲಿ ಉದ್ಯೋಗಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ನಿರ್ಧರಿಸಿದೆ.

ಮಾರ್ಚ್ 31 ರವರೆಗೆ ವಿನಾಯಿತಿ ನೀಡಿ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ಹೊರಡಿಸಿದೆ. ಇಲಾಖೆಯ ಅಜಯ್ ಕುಮಾರ್ ಸಿಂಗ್ ಈ ಆದೇಶ ಮಾಡಿದ್ದಾರೆ. ಸೋಂಕು ಹರಡಬಹುದು ಎಂಬ ಆತಂಕದ ಮೇಲೆ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ತಮ್ಮ ಹಾಜರಾತಿಯನ್ನು ಗುರುತಿಸುವುದರಿಂದ ನೌಕರರಿಗೆ ವಿನಾಯಿತಿ ನೀಡಲಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ವಲಯಗಳಿಗೆ ಅನ್ವಯವಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಕೊರೊನಾ ಬಗ್ಗೆ 30 ವರ್ಷಗಳ ಹಿಂದೆಯೇ ಕನ್ನಡ ಪತ್ರಿಕೆಯಲ್ಲಿ ಮಾಹಿತಿ!

ಈ ಅವಧಿಯಲ್ಲಿ ಅಂದರೆ ಮಾರ್ಚ್ 31 ರವರೆಗೆ ಎಲ್ಲಾ ಉದ್ಯೋಗಿಗಳು ಹಾಜರಾತಿ ರಿಜಿಸ್ಟರ್‌ನಲ್ಲಿ ತಮ್ಮ ಹಾಜರಾತಿಯನ್ನು ಗುರುತಿಸುವ ಅಗತ್ಯವಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಬಯೋಮೆಟ್ರಿಕ್ ವ್ಯವಸ್ಥೆಯನ್ನು 2014 ರಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಪರಿಚಯಿಸಲಾಗಿತ್ತು.

ಡೆಡ್ಲಿ ಕೊರೊನಾ ಹತ್ತಿಕ್ಕಲು ಸಫಲವಾಯಿತಾ ಡ್ರ್ಯಾಗನ್ ಚೀನಾ...?

ಇದುವರೆಗೆ ಭಾರತದಲ್ಲಿ 33 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಸೋಂಕು ಹರಡದಂತೆ ವ್ಯಾಪಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಭಯ ಪಡುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

English summary
Coronavirus: Central Government Exempts Employees From Use Of Biometric Attendance In Government Sector as well as private sectors.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X