ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಮತ್ತೊಬ್ಬರಿಗೆ ಸೋಂಕು, ಭಾರತದಲ್ಲಿ 31 ಮಂದಿಗೆ ಕೊರೊನಾ

|
Google Oneindia Kannada News

ನವದೆಹಲಿ, ಮಾರ್ಚ್.06: ಚೀನಾದಲ್ಲಿ ಮೊದಲಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ವಿದೇಶಗಳಲ್ಲೇ ಅತಿಹೆಚ್ಚು ಹರಡುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಮತ್ತೊಬ್ಬ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಹರಡಿರುವ ಬಗ್ಗೆ ತಿಳಿದು ಬಂದಿದೆ.

ದೆಹಲಿಯ ಉತ್ತಮ್ ನಗರದಲ್ಲಿರುವ ನಿವಾಸಿಯಲ್ಲಿ ಮಾರಕ ಸೋಂಕು ಪತ್ತೆಯಾಗಿದ್ದು, ಇದರಿಂದ ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು 31ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಸಂಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಅಮೆರಿಕಾ To ಭೂತಾನ್: ಇದು ಕೊರೊನಾ ವೈರಸ್ ಹೊತ್ತು ತಂದವರ ಕಥೆ ಅಮೆರಿಕಾ To ಭೂತಾನ್: ಇದು ಕೊರೊನಾ ವೈರಸ್ ಹೊತ್ತು ತಂದವರ ಕಥೆ

ಕೊರೊನಾ ವೈರಸ್ ಪೀಡಿತ ದೇಶಗಳಾದ ಥೈಲ್ಯಾಂಡ್ ಮತ್ತು ಮಲೇಶಿಯಾಗೆ ಉತ್ತಮ್ ನಗರ ನಿವಾಸಿಯು ಇತ್ತೀಚಿಗೆ ಭೇಟಿ ನೀಡಿ ವಾಪಸ್ಸಾಗಿದ್ದರು ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

Coronavirus: New Infected Case Positive In New-Delhi, Total 31 Cases In India

ಯಾವ ರಾಜ್ಯಗಳಲ್ಲಿ ಎಷ್ಟು ಪ್ರಕರಣ:

ಭಾರತದಲ್ಲಿ ಇದುವರೆಗೂ 31 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆ. ಜೈಪುರ್ ಅತಿಹೆಚ್ಚು ಅಂದರೆ 17 ಪ್ರಕರಣಗಳು ಪತ್ತೆಯಾಗಿವೆ. ಉತ್ತರ ಪ್ರದೇಶದ ಆಗ್ರಾದಲ್ಲಿ 6 ಮಂದಿಗೆ ಸೋಂಕು ತಗಲಿರುವ ಬಗ್ಗೆ ತಿಳಿದು ಬಂದಿದೆ. ದೆಹಲಿ ಮತ್ತು ಎನ್ಆರ್ ಸಿ ಪ್ರದೇಶದಲ್ಲಿ 4 ಸೋಂಕಿತ ಪ್ರಕರಣಗಳ ಇರುವ ಬಗ್ಗೆ ವರದಿಯಾಗಿದೆ. ಕೇರಳದಲ್ಲಿ 3 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈಗ ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇನ್ನೊಂದೆಡೆ ತೆಲಂಗಾಣದಲ್ಲಿ ಇದುವರೆಗೂ ಒಂದು ಕೊರೊನಾ ವೈರಸ್ ಸೋಂಕಿತ ಪ್ರಕರಣವು ಪತ್ತೆಯಾಗಿದೆ.

English summary
Coronavirus: New Infected Case Positive In New-Delhi, Total 31 Cases In India. Now More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X