ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 24 ಗಂಟೆಗಳಲ್ಲೇ 386 ಮಂದಿಗೆ ಕೊರೊನಾ ವೈರಸ್ ಸೋಂಕು

|
Google Oneindia Kannada News

ನವದೆಹಲಿ, ಏಪ್ರಿಲ್.01: ಕೊರೊನಾ ವೈರಸ್ ಕಾಟ ಭಾರತಕ್ಕೆ ಬೆನ್ನು ಬಿಡದ ಭೂತದಂತೆ ಕಾಡುತ್ತಿದೆ. ಭಾರತ ಲಾಕ್ ಡೌನ್ ಆಗಿದ್ದರೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 386ಕ್ಕೂ ಅಧಿಕ ಮಂದಿಗೆ ಸೋಂಕು ತಗಲಿರುವುದು ಸ್ಪಷ್ಟವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Recommended Video

First time in india anti-hiv drugs used on Italian couple with coronavirus patients in jaipur

ಮಾರ್ಚ್.01ರಿಂದ 15ರವರೆಗೂ ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಎಂಬ ಧರ್ಮಸಭೆಯಲ್ಲಿ ಭಾಗವಹಿಸಿದವರಲ್ಲಿ ಸೋಂಕು ಪತ್ತೆಯಾಗಿದ್ದು, ದೇಶಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗುವುದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಈಶಾನ್ಯ ರಾಜ್ಯ ವಿದ್ಯಾರ್ಥಿಗಳಿಗೆ ಪ್ರವೇಶ ನೀಡದ ಸೂಪರ್ ಮಾರ್ಕೆಟ್ಈಶಾನ್ಯ ರಾಜ್ಯ ವಿದ್ಯಾರ್ಥಿಗಳಿಗೆ ಪ್ರವೇಶ ನೀಡದ ಸೂಪರ್ ಮಾರ್ಕೆಟ್

ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ ವಾಲ್, ಕಳೆದ 24 ಗಂಟೆಗಳಲ್ಲಿ 386 ಸೋಂಕಿತ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆಯು 1,637ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.

Coronavirus: Past 24 Hours 386 New Infected Case Find In India

ದೇಶದಲ್ಲಿ ಇದುವರೆಗೂ 47,951 ಮಂದಿಯನ್ನು ಕೊರೊನಾ ವೈರಸ್ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ ಎಂದು ಭಾರತದ ವೈದ್ಯಕೀಯ ಸಂಶೋಧನಾ ಸಮಿತಿಯ ಹಿರಿಯ ವಿಜ್ಞಾನಿ ಆರ್.ಗಂಗಾ ಕೆಟ್ಕರ್ ತಿಳಿಸಿದ್ದಾರೆ. ಐಸಿಎಂಆರ್ ವ್ಯಾಪ್ತಿಯಲ್ಲಿ 126 ಮತ್ತು 51 ಖಾಸಗಿ ಲ್ಯಾಬ್ ಗಳಲ್ಲಿ ಕೊರೊನಾ ವೈರಸ್ ವೈದ್ಯಕೀಯ ತಪಾಸಣೆಯನ್ನು ನಡೆಸಲಾಗುತ್ತಿದೆ. ಇದರ ನಡುವೆ ಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸೋಂಕು ಹರಡುವುದನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ವಹಿಸಲಾಗಿದೆ. ಭಾರತದ 20 ಸಾವಿರ ರೈಲುಗಳಲ್ಲಿ 3 ಲಕ್ಷ 20 ಸಾವಿರ ಐಸೋಲೇಟೆಡ್ ಬೆಡ್ ಗಳನ್ನು ಸಿದ್ಧಪಡಿಸಲಾಗಿದೆ.

English summary
Coronavirus: Past 24 Hours 386 New Infected Case Find In India. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X