ಮೃತದೇಹವಿರುವ ಕೋಣೆಯಲ್ಲೇ ಕೊರೊನಾ ಸೋಂಕಿತರಿಗೆ ಚಿಕಿತ್ಸೆ
ನವದೆಹಲಿ, ಏಪ್ರಿಲ್ 29: ಮೃತದೇಹವಿರುವ ಪಕ್ಕದ ಹಾಸಿಗೆಯಲ್ಲಿ ನಮ್ಮನ್ನು ಮಲಗಿಸಿದ್ದರು ಎಂದು ಕೊವಿಡ್ 19 ರೋಗಿ ಆರೋಪಿಸಿದ್ದಾರೆ.
ವಾಟ್ಸಾಪ್‌ಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಮೃತದೇಹಗಳಿರುವ ಕೋಣೆಯಲ್ಲೇ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಶವವಿದ್ದ ಹಾಸಿಗೆಯ ಪಕ್ಕದಲ್ಲಿ ನನ್ನನ್ನು ಮಲಗಿಸಿದ್ದರು ಎಂದು ರೋಗಿಯೊಬ್ಬರು ಆರೋಪಿಸಿದ್ದರು. ಆದರೆ ಆಸ್ಪತ್ರೆಅಧಿಕಾರಿಗಳು ಇದನ್ನು ಅಲ್ಲಗಳೆದಿದ್ದಾರೆ. ರೋಗಿಗೆ ಕೌನ್ಸೆಲಿಂಗ್ ಅಗತ್ಯವಿದೆ. ಫಿಸಿಯೋ ಥೆರಪಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ.

ಆಸ್ಪತ್ರೆಯಲ್ಲಿ ಆಹಾರ, ಕುಡಿಯುವ ನೀರಿನ ಸಮಸ್ಯೆ ಇಲ್ಲ, ವಾರ್ಡ್ 27 ಅಲ್ಲಿ ಯಾವುದೇ ರೋಗಿಯು ಮೃತಪಟ್ಟಿಲ್ಲ.ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲಾ ಸಾಮಗ್ರಿಗಳಿವೆ ಎಂದು ವೈದ್ಯರು ಹೇಳಿದ್ದಾರೆ.
ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಒಂದೂ ಸಾವಿನ ಪ್ರಕರಣ ವರದಿಯಾಗಿಲ್ಲ.ಜಿಬಿ ಪಂತ್ ಆಸ್ಪತ್ರೆಯಲ್ಲಿ ನರ್ಸ್‌ಗಳಿಗೆ ಯಾವುದೇ ಸೌಲಭ್ಯಗಳಿಲ್ಲ. ಹೆಲ್ತ್‌ಕಿಟ್‌ಗಳ ಪೂರೈಕೆಯನ್ನೂ ಮಾಡಿರಲಿಲ್ಲ.
ಕೊವಿಡ್ 19 ರೋಗಿಗಳಿಗೆ ಚಿಕಿತ್ಸೆ ನೀಡಿದ ನರ್ಸ್‌ಗಳಿಗೆ ಆಸ್ಪತ್ರೆಯಲ್ಲೇ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಅವರಿಗೆ ಆಹಾರ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.












Click it and Unblock the Notifications