ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವದೆಹಲಿಯಲ್ಲಿ ಸೋಂಕಿತರಿಗಿಂತ ಗುಣಮುಖರ ಸಂಖ್ಯೆಯೇ ಹೆಚ್ಚು!

|
Google Oneindia Kannada News

ನವದೆಹಲಿ, ಜುಲೈ.31: ಕೊರೊನಾವೈರಸ್ ಸೋಂಕಿತರ ಅಂಕಿ-ಸಂಖ್ಯೆಗೆ ಸಂಬಂಧಿಸಿದಂತೆ ನವದೆಹಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಶೇ.89.18ರಷ್ಟು ಸೋಂಕಿತರು ಗುಣಮುಖರಾಗಿದ್ದು ತಿಳಿದು ಬಂದಿದೆ. ರಾಷ್ಟ್ರ ರಾಜಧಾನಿಯಲ್ಲಿ ಸೋಂಕು ಹರಡುವಿಕೆ ಪ್ರಮಾಣಕ್ಕಿಂತ ಗುಣಮುಖರಾಗುತ್ತಿರುವ ಪ್ರಮಾಣವೇ ಹೆಚ್ಚಾಗಿದೆ.

ನವದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 1195 ಮಂದಿಗೆ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡಿದ್ದು, ಮಹಾಮಾರಿಗೆ 27 ಜನರು ಪ್ರಾಣ ಬಿಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆಯು ಈಗಾಗಲೇ 135598ಕ್ಕೆ ಏರಿಕೆಯಾಗಿದೆ. 5763 ಸೋಂಕಿತರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗಿದೆ.

ಕೊವಿಡ್ ಸಾವಿನಲ್ಲಿ ಇಟಲಿ ಹಿಂದಿಕ್ಕಿ 5ನೇ ಸ್ಥಾನಕ್ಕೇರಿದ ಭಾರತಕೊವಿಡ್ ಸಾವಿನಲ್ಲಿ ಇಟಲಿ ಹಿಂದಿಕ್ಕಿ 5ನೇ ಸ್ಥಾನಕ್ಕೇರಿದ ಭಾರತ

ಕಳೆದ 24 ಗಂಟೆಗಳಲ್ಲಿ 1206 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ನವದೆಹಲಿಯಲ್ಲಿ ಇದುವರೆಗೂ 120930 ಮಂದಿ ಸೋಂಕಿತರು ಗುಣಮುಖರಾಗಿದ್ದು, 10705 ಸಕ್ರಿಯ ಪ್ರಕರಣಗಳಿವೆ. ಇನ್ನು, ಮಹಾಮಾರಿಗೆ ಇದುವರೆಗೂ 3963 ಜನರು ಪ್ರಾಣ ಬಿಟ್ಟಿದ್ದಾರೆ.

 New Delhi: Coronavirus Recovery Rates Rised To 89.18 Percent

ಭಾರತದಲ್ಲಿ ಹೇಗಿದೆ ಕೊರೊನಾವೈರಸ್ ಕಂಡೀಷನ್?:

ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ ಒಟ್ಟು ಸೋಂಕಿತರ ಸಂಖ್ಯೆ 54529 ಮಂದಿಗೆ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಯು 16,93,879ಕ್ಕೆ ಏರಿಕೆಯಾಗಿದೆ. ಒಂದೇ ದಿನ ಮಹಾಮಾರಿಗೆ 762 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 36548ಕ್ಕೆ ಏರಿಕೆಯಾಗಿದೆ. ಇನ್ನು, ದೇಶಾದ್ಯಂತ ಈವರೆಗೂ 1091747 ಸೋಂಕಿತರು ಗುಣಮುಖರಾಗಿದ್ದರೆ, ಬಾಕಿ ಉಳಿದ 563584 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

English summary
New Delhi: Coronavirus Recovery Rates Rised To 89.18 Percent, Know More About Health Bulletin.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X