ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ಲಸಿಕೆ ಕುರಿತು ಚರ್ಚೆಗೆ ಸರ್ವಪಕ್ಷ ಸಭೆ ಕರೆದ ಪ್ರಧಾನಿ

|
Google Oneindia Kannada News

ನವದೆಹಲಿ, ಡಿಸೆಂಬರ್.04: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕುರಿತು ಚರ್ಚಿಸುವುದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಎಲ್ಲ ಪಕ್ಷಗಳ ಸಂಸದೀಯ ಸದಸ್ಯರು ಶುಕ್ರವಾರ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಕಿರಿಯ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ವಿ. ಮುರಳೀಧರನ್ ಅವರು ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರದ ಸಂಪುಟ ಸಹೋದ್ಯೋಗಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಾ ಈ ಸಭೆಯಲ್ಲಿ ಹಾಜರಾಗಲಿದ್ದಾರೆ.

ಸಿಹಿಸುದ್ದಿ: ಭಾರತದಲ್ಲಿ 90,16,289 ಕೊರೊನಾ ಸೋಂಕಿತರು ಗುಣಮುಖಸಿಹಿಸುದ್ದಿ: ಭಾರತದಲ್ಲಿ 90,16,289 ಕೊರೊನಾ ಸೋಂಕಿತರು ಗುಣಮುಖ

ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾಮಾಜಿಕ ನ್ಯಾಯ ಸಚಿವ ಥವಾರ್ ಚಾಂದ್ ಗೆಹ್ಲೋಟ್, ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Coronavirus Vaccine Development: PM Narendra Modi Takes All-Party Meeting To Discuss About Pandemic

ಕೇಂದ್ರದ ಸರ್ವಪಕ್ಷ ಸಭೆಯ ಪ್ರಮುಖ ಅಂಶ:

- ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟಕ್ಕೆ ಯಾವೆಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ವಿದೇಶಗಳಿಗೂ ಮತ್ತು ಭಾರತದಲ್ಲಿ ತೆಗೆದುಕೊಂಡ ಶಿಸ್ತುಕ್ರಮಗಳ ಕುರಿತು ಕೇಂದ್ರ ಆರೋಗ್ಯ ಕಾರ್ಯದರ್ಶಿಯವರು 15-20 ನಿಮಿಷಗಳ ಕಾಲ ಸದಸ್ಯರಿಗೆ ಮಾಹಿತಿ ನೀಡಲಿದ್ದಾರೆ.

- ದೇಶದಲ್ಲಿ ಯಾವ ಯಾವ ಕಂಪನಿಗಳು ಕೊರೊನಾವೈರಸ್ ಲಸಿಕೆ ಸಂಶೋಧನೆಯಲ್ಲಿ ತೊಡಗಿವೆ. ಲಸಿಕೆ ಪ್ರಯೋಗದ ವೈದ್ಯಕೀಯ ಸಂಶೋಧನೆಯು ಯಾವ ಹಂತದಲ್ಲಿದೆ ಎಂಬುದರ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಾತನಾಡಲಿದ್ದಾರೆ.

- ಸರ್ವಪಕ್ಷಗಳ ಸಭಯೆ ಅಂತಿಮ ಹಂತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತನಾಡಲಿದ್ದಾರೆ.

- ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಆರಂಭದಿಂದ ಕೇಂದ್ರ ಸರ್ಕಾರವು ನಡೆಸುತ್ತಿರುವ 2ನೇ ಸರ್ವಪಕ್ಷಗಳ ಸಭೆ ಇದಾಗಿದೆ. ಭಾರತ ಲಾಕ್ ಡೌನ್ ಜಾರಿಗೊಳಿಸುವುದಕ್ಕೂ ಮೊದಲು ಏಪ್ರಿಲ್ ನಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಗಿತ್ತು.

- ಹೈದ್ರಾಬಾದ್, ಪುಣೆ, ಅಹ್ಮದಾಬಾದ್ ನಲ್ಲಿರುವ ಕೊರೊನಾವೈರಸ್ ಲಸಿಕೆ ಸಂಶೋಧನಾ ಕೇಂದ್ರಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ ಒಂದು ವಾರದಲ್ಲೇ ಈ ಸರ್ವಪಕ್ಷಗಳ ಸಭೆ ನಡೆಸಲಾಗುತ್ತಿದ್ದು, ಲಸಿಕೆ ಅಭಿವೃದ್ಧಿ ಕುರಿತು ಸಂಸ್ಥೆಗಳು ನೀಡಿರುವ ಮಾಹಿತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ.

Recommended Video

ನಾಳೆ ಬಂದ್ ಮಾಡುವವರಿಗೆ ಕಿವಿ ಮಾತು ಹೇಳಿದ ಮುಖ್ಯಮಂತ್ರಿಗಳು | Oneindia Kannada

English summary
Coronavirus Vaccine Development: PM Narendra Modi Takes All-Party Meeting To Discuss About Pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X