ಬಂಧನದಿಂದ ತಾತ್ಕಾಲಿಕ ನೆಮ್ಮದಿ ಪಡೆದ ರಾಬರ್ಟ್‌ ವಾದ್ರಾ

ನವದೆಹಲಿ, ಫೆಬ್ರವರಿ 02: ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಗಾಂಧಿ ಕುಟುಂಬದ ಅಳಿಯ ರಾಬರ್ಟ್‌ ವಾದ್ರಾ ಅವರನ್ನು ಫೆಬ್ರವರಿ 16 ರವರೆಗೆ ಬಂಧಿಸುವಂತಿಲ್ಲ ಎಂದು ದೆಹಲಿಯ ಪಟಿಯಾಲಾ ನ್ಯಾಯಾಲಯವು ಆದೇಶ ನೀಡಿದೆ.

ಕಳೆದ ಡಿಸೆಂಬರ್ 7 ರಂದು ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಅವರ ಮೇಲೆ ಐಟಿ ಮತ್ತು ಇಡಿ ದಾಳಿ ನಡೆದಿತ್ತು. ತನಿಖೆ ನಂತರ ಇಡಿಯು ವಾದ್ರಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸು ದಾಖಲಿಸಿತ್ತು. ಇದು ವಾದ್ರಾ ಅವರಿಗೆ ಬಂಧನ ಭೀತಿ ತಂದಿತ್ತು. ಹಾಗಾಗಿ ವಾದ್ರಾ ಅವರು ನಿರೀಕ್ಷಣಾ ಜಾಮೀನಿಗೆ ಮನವಿ ಮಾಡಿದ್ದರು.

ವಾದ್ರಾ ಅವರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯವು ವಾದ್ರಾ ಅವರಿಗೆ ಫೆಬ್ರವರಿ 16 ರವ ರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಈ ನಡುವೆ ವಾದ್ರಾ ಅವರು ಅಗತ್ಯ ದಾಖಲೆಗಳನ್ನು ಇಡಿಗೆ ಸಲ್ಲಿಸಬಹುದಾಗಿದೆ.

Court grants interim protection to Robert Vadra till 16th February

ಲಂಡನ್‌ ಮೂಲದ ಸಂಸ್ಥೆಗೆ 17.77 ಕೋಟಿ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ರಾಬರ್ಟ್‌ ವಾದ್ರಾ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ. ಇದೇ ಪ್ರಕರಣದಲ್ಲಿ ವಾದ್ರಾ ಆಪ್ತ ಮನೋಜ್ ಅರೋರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ವಾದ್ರಾ ಮೇಲೆ ಇಡಿ ದಾಳಿ ನಡೆಸಿದ್ದನ್ನು ತೀವ್ರವಾಗಿ ಕಾಂಗ್ರೆಸ್ ಖಂಡಿಸಿತ್ತು. ವಾದ್ರಾ ಸಹ ಕಾಂಗ್ರೆಸ್‌ಗೆ ಮಸಿ ಬಳಿಯಲೆಂದು ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಹೇಳಿದ್ದರು.

ರಾಬರ್ಟ್‌ ವಾದ್ರಾ ಪತ್ನಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇತ್ತೀಚೆಗಷ್ಟೆ ಸಕ್ರಿಯ ರಾಜಕೀಯಕ್ಕೆ ಬಂದಿದ್ದು, ಅವರು ಎಐಸಿಸಿಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+