ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಳ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಕೇಜ್ರಿವಾಲ್

|
Google Oneindia Kannada News

ನವದೆಹಲಿ,ಜೂನ್ 26: ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರಬಹುದು ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮೊದಲು ಪ್ರತಿ ದಿನ 7 ಸಾವಿರ ಮಂದಿಯ ಪರೀಕ್ಷೆ ನಡೆಸಲಾಗುತ್ತಿತ್ತು, ಬಳಿಕ, 20ಸಾವಿರ ಈಗ ನಿತ್ಯ 30ಸಾವಿರ ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗುತ್ತಿದೆ.

ಜುಲೈ 6ರೊಳಗೆ ದೆಹಲಿಯ ಪ್ರತಿ ಮನೆಗಳಲ್ಲೂ ಕೊವಿಡ್ ಸ್ಕ್ರೀನಿಂಗ್ಜುಲೈ 6ರೊಳಗೆ ದೆಹಲಿಯ ಪ್ರತಿ ಮನೆಗಳಲ್ಲೂ ಕೊವಿಡ್ ಸ್ಕ್ರೀನಿಂಗ್

ಒಟ್ಟಾರೆ ಕೊರೊನಾ ಸೋಂಕಿತರ ಪೈಕಿ 45 ಸಾವಿರ ಮಂದಿ ಗುಣಮುಖರಾಗಿದ್ದಾರೆ ಎಂದು ಹೇಳಿದ್ದಾರೆ.60 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ.

COVID-19 Cases High In Delhi But Situation Is Under Control

ಇದುವರೆಗೆ ದೆಹಲಿಯಲ್ಲಿ 2400 ಮಂದಿ ಮೃತಪಟ್ಟಿದ್ದಾರೆ. 26 ಸಾವಿರ ಸಕ್ರಿಯ ಪ್ರಕರಣಗಳಿವೆ. 6 ಸಾವಿರ ಮಂದಿ ಆಸ್ಪತ್ರೆಯಲ್ಲಿದ್ದಾರೆ. ಪ್ರತಿನಿತ್ಯ 3 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ ಎಲ್ಲರನ್ನೂ ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ನೀಡುವ ಅಗತ್ಯವಿಲ್ಲ. ತೀರಾ ಉಸಿರಾಟದ ತೊಂದರೆ ಕಾಣಿಸಿಕೊಂಡರೆ ಮಾತ್ರ ಆಸ್ಪತ್ರೆಗೆ ದಾಖಲಾಗಬೇಕು.

ಹೆಚ್ಚೆಚ್ಚು ಹಾಸಿಗೆಗಳನ್ನು ಸಿದ್ಧಪಡಿಸಲು ಸರ್ಕಾರವು ಅನುದಾನವನ್ನು ಬಿಡುಗಡೆ ಮಾಡಿದೆ. ಹೆಚ್ಚು ಐಸಿಯು ಬೆಡ್‌ಗಳ ಅಗತ್ಯವಿದೆ. ಬುರಾರಿಯಲ್ಲಿರುವ ಆಸ್ಪತ್ರೆಯಲ್ಲಿ 400 ಹಾಸಿಗೆಗಳು ಸಿದ್ಧಪಡಿಸಲು ಹಣ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಹೋಟೆಲ್‌ಗಳಲ್ಲಿ 3500 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ ಎಂದರು.

English summary
Delhi Chief Minister Arvind Kejriwal on friday said that number of COVID19 cases in the delhi is high but the situation is under control and there is no need to worry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X