ದೆಹಲಿಯಲ್ಲಿ ಶೇ.90ರಷ್ಟು ರೋಗಿಗಳು ಕೊರೊನಾದಿಂದ ಗುಣಮುಖ
ನವದೆಹಲಿ, ಆಗಸ್ಟ್ 26: ದೆಹಲಿಯಲ್ಲಿ ಕೊವಿಡ್ 19 ರೋಗದಿಂದ ಗುಣಮುಖ ಹೊಂದುತ್ತಿರುವವರ ಸಂಖ್ಯೆ ಶೇ.90ರಷ್ಟು ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
Recommended Video
ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 1,693 ಹೊಸ ಪ್ರಕರಣಗಳು ವರದಿಯಾಗಿದ್ದು ಒಟ್ಟು 14 ಸಾವಿರದ 130 ಹಾಸಿಗೆಗಳಿವೆ., ಅವುಗಳಲ್ಲಿ 10,448 ಹಾಸಿಗೆಗಳು ಖಾಲಿಯಿವೆ. ಕೊವಿಡ್ ಪರೀಕ್ಷೆಗಳನ್ನು ಸರ್ಕಾರ ಹೆಚ್ಚಿಸಲಿದೆ. ಮುಂದಿನ ವಾರ 40 ಸಾವಿರ ಪರೀಕ್ಷೆಗಳನ್ನು ಪ್ರತಿದಿನ ನಡೆಸಲಾಗುವುದು ಎಂದರು.
ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಲು ಇಂದು ಕೇಜ್ರಿವಾಲ್ ಸಭೆ ಕರೆದಿದ್ದರು ಅದರಲ್ಲಿ ಸಚಿವರುಗಳು ಮತ್ತು ಇತರ ಕೆಲವು ಅಧಿಕಾರಿಗಳು ಭಾಗಿಯಾಗಿದ್ದರು.

ಮುಂದಿನ ದಿನಗಳಲ್ಲಿ ಕೊವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಸಲು ಆದೇಶ ನೀಡುವಂತೆ ಮತ್ತು ಕಾನೂನು ಪಾಲನೆಯಾಗುತ್ತಿದೆಯೇ ಎಂದು ನೋಡಿಕೊಳ್ಳುವಂತೆ ಕೇಜ್ರಿವಾಲ್ ಆದೇಶ ಹೊರಡಿಸಿದರು.
ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಗಳನ್ನು ಧರಿಸಬೇಕು, ಜನರ ಅತಿಯಾದ ಆತ್ಮವಿಶ್ವಾಸದಿಂದ ಹಲವರಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದರೂ ಕೂಡ ಪರೀಕ್ಷೆ ಮಾಡಿಸಿಕೊಳ್ಳುವುದಿಲ್ಲ, ಇದರಿಂದ ಸೋಂಕು ಹರಡುವುದು ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications