• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲಾಕ್‌ಡೌನ್ ಒಂದೇ ಆಯ್ಕೆಯಲ್ಲ, ಕಠಿಣ ನಿರ್ಬಂಧಗಳು ಜಾರಿ: ಕೇಜ್ರಿವಾಲ್

|

ನವದೆಹಲಿ, ಏಪ್ರಿಲ್ 10: ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್‌ಡೌನ್ ಒಂದೇ ಆಯ್ಕೆಯಲ್ಲ, ಕಠಿಣ ನಿರ್ಬಂಧಗಳನ್ನು ಜಾರಿ ಮಾಡಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವದಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಅಲೆ ಮುಂದುವರೆದಿದೆ. ಮತ್ತೊಮ್ಮೆ ಲಾಕ್‌ಡೌನ್ ಹೇರುವ ಯಾವುದೇ ಯೋಜನೆಗಳಿಲ್ಲ, ಕೆಲವು ನಿರ್ಬಂಧಗಳನ್ನು ಹೇರಲಾಗುವುದು ಎಂದಿದ್ದಾರೆ.

"ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಳ್ಳಬೇಡಿ"

ಪ್ರಸ್ತುತ ನಗರದಲ್ಲಿ ಬೇಕಾದಷ್ಟು ಹಾಸಿಗೆಗಳು ಹಾಗೂ ವೆಂಟಿಲೇಟರ್‌ಗಳನ್ನು ಸಿದ್ಧಪಡಿಸಲಾಗಿದೆ. ದೆಹಲಿ ಜನತೆಯ ಸುರಕ್ಷತೆಯನ್ನು ಖಾತರಿಪಡಿಸಲಿದ್ದೇವೆ ಎಂದರು.

ಕಳೆದ ಕೆಲವು ದಿನಗಳಿಂದ ದೆಹಲಿ ಸೇರಿದಂತೆ ದೇಶಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗಿವೆ. ಏಕಕಾಲದಲ್ಲಿ ನಾವು ಲಸಿಕೆ ವಿತರಣೆ ಜತೆಗೆ ಕೊರೊನಾ ಹರಡುವುದನ್ನು ತಡೆಗಟ್ಟಲುಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಶುಕ್ರವಾರ 8521 ಪ್ರಕರಣಗಳು ಪತ್ತೆಯಾಗಿದ್ದವು, ಕಳೆದ ವರ್ಷ ನವೆಂಬರ್ ಬಳಿಕ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ. ಇಂದು ಅರವಿಂದ್ ಕೇಜ್ರಿವಾಲ್ ಲೋಕ್ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ಭೇಟಿ ನೀಡಿ, ಕೋವಿಡ್ ರೋಗಿಗಳಿಗೆ ಒದಗಿಸಿದ ಸೌಲಭ್ಯವನ್ನು ಪರಿಶೀಲಿಸಿದರು.ಕಳೆದ 24 ಗಂಟೆಗಳಲ್ಲಿ 1,45,384 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಶುಕ್ರವಾರ 77,567 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೂ ಒಟ್ಟು 1,19,90,859 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 794 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಇದುವರೆಗೂ 1,68,436 ಮರಣ ಪ್ರಕರಣಗಳು ದಾಖಲಾಗಿವೆ.

English summary
Amid escalating cases of COVID-19 in Delhi, Chief Minister Arvind Kejriwal on Saturday said lockdown is "not an option" but some restrictions will be put in place in the national capital which is reeling under the fourth wave of the coronavirus pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X