ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಬಿಕ್ಕಟ್ಟು: ಅಗತ್ಯವಿರುವವರಿಗೆ ಸಹಾಯ ಮಾಡುವಂತೆ ರಾಹುಲ್ ಮನವಿ

|
Google Oneindia Kannada News

ನವದೆಹಲಿ, ಮೇ 11: ಕೊರೊನಾ ಸೋಂಕಿನ ಬಿಕ್ಕಟ್ಟಿನ ಸಂದರ್ಭದಲ್ಲಿ ಅಗತ್ಯವಿರುವವರಿಗೆ ಸಹಾಯ ಹಸ್ತ ಚಾಚುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೊನಾವೈರಸ್ ವಿರುದ್ಧದ ಹೋರಾಟವನ್ನು ಬಲಪಡಿಸಲು SpeakUpToSaveLives ಅಭಿಯಾನದಲ್ಲಿ ಸೇರಿಕೊಳ್ಳುವಂತೆ ಅವರು ಕೋರಿದ್ದಾರೆ.

ಜನರಿಗೆ ನೆರವಾಗಲು ಎಐಸಿಸಿ ಕೇಂದ್ರ ಕಚೇರಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಗಳಲ್ಲಿ ಕಂಟ್ರೋಲ್ ರೂಂನ್ನು ಕಾಂಗ್ರೆಸ್ ಸ್ಥಾಪಿಸಿದೆ. ಅಗತ್ಯವಾದವರಿಗೆ ಆಕ್ಸಿಜನ್, ಹಾಸಿಗೆಗಳು ಮತ್ತು ಅತ್ಯಾವಶ್ಯಕ ಔಷಧಿಗಳನ್ನು ಪಕ್ಷದ ವತಿಯಿಂದ ವ್ಯವಸ್ಥೆ ಮಾಡಲಾಗುತ್ತಿದೆ.

ಚಾಮರಾಜನಗರ ದುರಂತ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿ ಅನೇಕರ ಸಂತಾಪಚಾಮರಾಜನಗರ ದುರಂತ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿ ಅನೇಕರ ಸಂತಾಪ

ದೇಶದ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನೇಷನ್ ನೀಡುವಂತೆ ಕರೆ ನೀಡಿದೆ. ಆಮ್ಲಜನಕ, ವೆಂಟಿಲೇಟರ್ , ಐಸಿಯು ಬೆಡ್ ಗಳು ಮತ್ತು ಲಸಿಕೆಯ ಕೊರತೆಯನ್ನು ತೋರಿಸುವ ಒಂದು ನಿಮಿಷದ ವಿಡಿಯೋವೊಂದನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಈ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದ ಜನರು ಕೈ ಜೋಡಿಸಬೇಕಾದ ಅಗತ್ಯವಿದೆ.ಜೀವ ಉಳಿಸಲು ಎಲ್ಲರೂ ನಮ್ಮ ಕೈಲಾದಷ್ಟು ಮಾಡೋಣ.

Covid-19: Rahul Gandhi Urges People To Provide Helping Hand To Needy

SpeakUpToSaveLives ಅಭಿಯಾನಕ್ಕೆ ಸೇರ್ಪಡೆಯಾಗಿ ಮತ್ತು ಕೊರೊನಾ ವಿರುದ್ಧದ ಹೋರಾಟವನ್ನು ಬಲಪಡಿಸೋಣ ಎಂದು ಅವರು ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಒಂದೇ ದಿನ 3,29,942 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,26,62,575ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಈವರೆಗೂ 2,49,99 ಜನರು ಜೀವ ಚೆಲ್ಲಿದ್ದಾರೆ. ಒಂದು ದಿನದಲ್ಲಿ 3,56,082 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 1,90,27,304 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರ ಹೊರತಾಗಿ ಭಾರತದಲ್ಲಿ 37,15,221 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

English summary
Congress leader Rahul Gandhi on Tuesday urged people to provide a helping hand to the needy in these distressing times of the COVID-19 pandemic. He said this while asking them to join the 'SpeakUpToSaveLives' campaign to strengthen the fight against coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X