ಕರ್ನಾಟಕ ಸೇರಿ 6 ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಂವಾದ
ನವದೆಹಲಿ, ಜುಲೈ 16: ರಾಜ್ಯಗಳಲ್ಲಿನ ಕೋವಿಡ್- 19 ಸೋಂಕು ಪ್ರಕರಣಗಳ ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಕರ್ನಾಟಕ ಸೇರಿದಂತೆ ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಆಂಧ್ರಪ್ರದೇಶ ಸಿಎಂ ಜಗನ್‌ಮೋಹನ್ ರೆಡ್ಡಿ, ಕರ್ನಾಟಕ ಸಿಎಂ ಬಿ.ಎಸ್. ಯಡಯೂರಪ್ಪ, ಒಡಿಶಾ ಸಿಎಂ ನವೀನ್ ಪಟ್ನಾಯಿಕ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ಕೇರಳದ ಸಿಎಂ ಪಿಣರಾಯಿ ವಿಜಯನ್‌ರೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ವೀಡಿಯೊ ಕಾನ್ಫರೆನ್ಸ್ ಮೂಲಕ ಆರು ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪ ಸಹ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಕರ್ನಾಟಕದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳಲಿದ್ದಾರೆ.

ಕಳೆದ ಮಂಗಳವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸೋಂಕು ಹೆಚ್ಚು ಇರುವ ಮತ್ತೊಂದು ಎಂಟು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಹನ ನಡೆಸಿದ್ದರು. ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ವ್ಯಾಕ್ಸಿನೇಷನ್ ಡ್ರೈವ್ ಅನ್ನು ನಿರಂತರವಾಗಿ ಹೆಚ್ಚಿಸುವ ಅಗತ್ಯವಿದೆ ಎಂದು ಹೇಳಿದ್ದರು.
ಗುಜರಾತ್‌ನಲ್ಲಿ ಹಲವು ಯೋಜನೆಗಳಿಗೆ ಚಾಲನೆ
ಗುಜರಾತ್‌ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ.
ಗಾಂಧಿನಗರ ಮತ್ತು ವಾರಣಾಸಿಗೆ ಸಂಪರ್ಕ ಕಲ್ಪಿಸುವ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗಾಂಧಿನಗರ ಮತ್ತು ವಾರೆಥಾ ನಡುವೆ ದುರಸ್ತಿ ರೈಲುಗಳ ಸಂಚಾರಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.












Click it and Unblock the Notifications