ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೋವಿಡ್ ಸೋಂಕು ಹೆಚ್ಚಳ: ಯುಕೆ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ
ನವದೆಹಲಿ, ಮೇ 12: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯುಕೆ ಪ್ರವಾಸ ರದ್ದುಗೊಂಡಿದೆ.
ಮುಂದಿನ ತಿಂಗಳು ಜೂನ್ ತಿಂಗಳಿನಲ್ಲಿ ನಡೆಯಲಿರುವ ಜಿ-7 ಶೃಂಗಸಭೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಪ್ರಸ್ತುತ ದೇಶದ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ಆಹ್ವಾನಿತರಾಗಿ ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಪ್ರಧಾನಿ ನರೇಂದ್ರ ಮೋದಿಗೆ ನೀಡಿದ ಆಹ್ವಾನವನ್ನು ಶ್ಲಾಘಿಸುತ್ತೇವೆ.
ಆದರೆ, ಜಿ-7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಖುದ್ದಾಗಿ ಭಾಗವಹಿಸುವುದಿಲ್ಲ ಎಂದು ನಿರ್ಧರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ವಕ್ತಾರರು ತಿಳಿಸಿದ್ದಾರೆ.
Comments
English summary
Prime Minister Narendra Modi's UK tour has been canceled as coronavirus cases increases in India.
Story first published: Wednesday, May 12, 2021, 9:31 [IST]