ಭಾರತದಲ್ಲಿ 2.87 ಕೋಟಿ ಡೋಸ್ ಲಸಿಕೆ ಇನ್ನೂ ಬಳಕೆಯಾಗಿಲ್ಲ
ನವದೆಹಲಿ, ಜುಲೈ 27: ಕೊರೊನಾವೈರಸ್ ಲಸಿಕೆಯು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಎಷ್ಟರ ಮಟ್ಟಿಗೆ ಪೂರೈಕೆಯಾಗುತ್ತಿವೆ. ಭಾರತದಲ್ಲಿ ನಿಜವಾಗಿಯೂ ಕೊವಿಡ್-19 ಲಸಿಕೆಯ ಕೊರತೆ ಸೃಷ್ಟಿಯಾಗಿದೆಯೇ ಎನ್ನುವುದಕ್ಕೆ ಅಂಕಿ-ಅಂಶಗಳ ಸಹಿತ ಉತ್ತರ ಇಲ್ಲಿದೆ ಓದಿ.
ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 193 ದಿನಗಳೇ ಕಳೆದಿದ್ದು, ಈವರೆಗೂ 44 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 36,87,239 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 44,58,39,699 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ
ಕೇಂದ್ರ ಸರ್ಕಾರದಿಂದ ಈವರೆಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಷ್ಟು ಡೋಸ್ ಲಸಿಕೆ ಪೂರೈಕೆ ಆಗಿದೆ. ಎಷ್ಟು ಡೋಸ್ ಕೊವಿಡ್-19 ಲಸಿಕೆ ಬಾಕಿ ಉಳಿದಿದೆ. ಎಷ್ಟು ಡೋಸ್ ಲಸಿಕೆ ವ್ಯರ್ಥವಾಗಿದೆ. ದೇಶದಲ್ಲಿ ಅನುಮೋದನೆ ಪಡೆದಿರುವ ಲಸಿಕೆಗಳು ಯಾವುವು ಎಂಬುದರ ಕುರಿತು ಮುಂದೆ ಓದಿ.
2021ರ ಜುಲೈ 27ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 45,37,70,580 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:
* ಪೂರೈಕೆಯಾದ ಲಸಿಕೆ ಪ್ರಮಾಣ - 45,73,30,110
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 24,11,000
* ಬಳಕೆ ಆಗಿರುವ ಲಸಿಕೆ ಪ್ರಮಾಣ - 43,80,46,844
* ಕೊವಿಡ್-19 ಲಸಿಕೆಯ ಲಭ್ಯತೆ - 2,28,27,959
ಕೇಂದ್ರ ಸರ್ಕಾರದಿಂದ ಶೇ.75ರಷ್ಟು ಲಸಿಕೆ ಖರೀದಿಸಿ ಪೂರೈಕೆ
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.












Click it and Unblock the Notifications