Breaking; ದೆಹಲಿಯಲ್ಲಿನ ಕೋವಿಡ್‌ ಪರಿಸ್ಥಿತಿ; ಆರೋಗ್ಯ ಸಚಿವ ಹೇಳಿಕೆ

ನವದೆಹಲಿ, ಏಪ್ರಿಲ್ 28; ನವದೆಹಲಿಯಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲು ರಾಜ್ಯ ಸರ್ಕಾರ ತಯಾರಿ ಆರಂಭಿಸಿದೆ.

ದೆಹಲಿಯ ಆರೋಗ್ಯ ಸಚಿವ ಡಾ. ಸತ್ಯೇಂದ್ರ ಜೈನ್ ಗುರುವಾರ ರಾಜ್ಯದ ಕೋವಿಡ್ ಪರಿಸ್ಥಿತಿ ಬಗ್ಗೆ ಮಾತನಾಡಿದರು. "ರಾಜ್ಯದಲ್ಲಿ ಸುಮಾರು 5 ಸಾವಿರ ಸಕ್ರಿಯ ಕೋವಿಡ್ ಪ್ರಕರಣಗಳು ಇವೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ" ಎಂದರು.

"ನಾವು 10 ಸಾವಿರ ಕೋವಿಡ್ ಬೆಡ್‌ಗಳನ್ನು ಸಿದ್ಧವಾಗಿಟ್ಟುಕೊಂಡಿದ್ದೇವೆ. ಇವುಗಳಲ್ಲಿ 100 ಹಾಸಿಗೆಗಳು ಮಾತ್ರ ಭರ್ತಿಯಾಗಿವೆ" ಎಂದು ಆರೋಗ್ಯ ಸಚಿವರು ಹೇಳಿದರು.

Covid Cases Raise In Delhi Hospital Admissions Are Very Few Says Minister

ಕೇಂದ್ರ ಸರ್ಕಾರ ಈಗಾಗಲೇ 18 ವರ್ಷ ಮೇಲ್ಪಟ್ಟ ಎಲ್ಲರೂ ಬೂಸ್ಟರ್ ಡೋಸ್ ಪಡೆಯಲು ಅನುಮತಿ ನೀಡಿದೆ. "ದೆಹಲಿಯಲ್ಲಿ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲು ತಯಾರಿ ನಡೆಸಲಾಗುತ್ತಿದೆ" ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ದೆಹಲಿಯಲ್ಲಿ ಬುಧವಾರ 1,367 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ ಶೇ 13ರಷ್ಟು ಏರಿಕೆ ಕಂಡು ಬಂದಿದೆ. ರಾಜ್ಯದ ಪಾಸಿಟಿವಿಟಿ ದರ ಶೇ4.50 ಆಗಿದೆ.

ಕಳೆದ ಆರು ದಿನಗಳಿಂದ ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 1 ಸಾವಿರಕ್ಕಿಂತ ಹೆಚ್ಚು ದಾಖಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+