• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೇಶದ ಸ್ಥಿತಿ ಇಷ್ಟೊಂದು ಹದಗೆಟ್ಟಿದ್ದರೂ ಪ್ರಧಾನಿ ಒಪ್ಪಿಕೊಳ್ಳಲು ಸಿದ್ಧರಿಲ್ಲ: ಚಿದಂಬರಂ

|

ನವದೆಹಲಿ, ಮೇ 07: ದೇಶದ ಪರಿಸ್ಥಿತಿ ಇಷ್ಟೊಂದು ಹದಗೆಟ್ಟಿದ್ದರೂ ಪ್ರಧಾನಿ ಮೋದಿ ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಆರೋಪಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕದಿಂದಾಗಿ ದೇಶ ಅತಿ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ ಆದರೆ ಮೋದಿ ಮತ್ತೆ ಸಚಿವ ಹರ್ಷವರ್ಧನ್ ತಮ್ಮ ಜವಾಬ್ದಾರಿಯನ್ನು ಅರಿತು ಪರಿಸ್ಥಿತಿ ನಿಭಾಯಿಸುತ್ತಿಲ್ಲ ಎಂದರು.

ವಿವಿಧ ರಾಜ್ಯಗಳಿಗೆ ವಾರದ ಬಳಕೆಗಾಗಿ ಕೇಂದ್ರದಿಂದ 19.2 ಲಕ್ಷ ರೆಮ್‌ಡೆಸಿವಿರ್ ವಯಲ್ಸ್ ಹಂಚಿಕೆ ವಿವಿಧ ರಾಜ್ಯಗಳಿಗೆ ವಾರದ ಬಳಕೆಗಾಗಿ ಕೇಂದ್ರದಿಂದ 19.2 ಲಕ್ಷ ರೆಮ್‌ಡೆಸಿವಿರ್ ವಯಲ್ಸ್ ಹಂಚಿಕೆ

ಎಲ್ಲಾ ರಾಜ್ಯಗಳಲ್ಲಿ ಪರಿಸ್ಥಿತಿ ಭಿನ್ನವಾಗಿದೆ, ಇಂಥ ಸಂದರ್ಭದಲ್ಲಿ ಪ್ರಧಾನಿ ಹಾಗೂ ಆರೋಗ್ಯ ಸಚಿವರು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದು, ಪ್ರಜಾಪ್ರಭುತ್ವದ ತತ್ವಗಳನ್ನು ಅಣಕಿಸುತ್ತಿದ್ದಾರೆ.

ಶುಕ್ರವಾರ ಒಂದೇ ದಿನ 4.14 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಸಕ್ರಿಯ ಪ್ರಕರಣಗಳು 36 ಲಕ್ಷ ದಾಟಿದೆ, ಸಾಂಕ್ರಾಮಿಕ ರೋಗ ದೇಶದ ಪರಿಸ್ಥಿತಿಯನ್ನು ತೀರಾ ಹದಗೆಡಿಸುತ್ತಿದೆ, ಇಂಥಾ ವೇಳೆ ರೋಗದ ವಿರುದ್ಧ ಹೋರಾಡಲು ಬೇಕಾದ ಲಸಿಕೆಗಳು, ಹಾಸಿಗೆಗಳ ಕೊರತೆ ಎದುರಾಗಿದೆ.

ಶುಕ್ರವಾರದಂದು ದೇಶದಲ್ಲಿ ಮತ್ತೆ ದಾಖಲೆಯ 4,14,188 ಹೊಸ ಪ್ರಕರಣಗಳು ದೃಢವಾಗಿವೆ ಮತ್ತು ದಾಖಲೆಯ 3,915 ಸಾವು ಸಂಭವಿಸಿದೆ. ಗುರುವಾರ ಕೂಡ ದೇಶದಲ್ಲಿ 4.14 ಲಕ್ಷ ಹೊಸ ಕೇಸ್ ದಾಖಲಾಗಿದ್ದವು. ಈ ಮೂಲಕ ದೇಶದಲ್ಲಿ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.14 ಕೋಟಿಗೆ ಏರಿಕೆಯಾಗಿದೆ.

ಇನ್ನು ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಇದೀಗ ಸಾವಿನ ಸಂಖ್ಯೆ 2,34,083ಕ್ಕೆ ತಲುಪಿದೆ. ಸೋಂಕಿತರ ಸಂಖ್ಯೆ ಸತತ ಏರುತ್ತಿರುವ ಪರಿಣಾಮ ದೇಶದ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 36,45,164ಕ್ಕೆ ಹೆಚ್ಚಿದೆ.

English summary
Asserting that the COVID-19 pandemic situation is going from bad to worse, senior Congress leader P Chidambaram on Friday alleged that Prime Minister Narendra Modi and Health Minister Harsh Vardhan are refusing to own responsibility and are making a "mockery of democratic principles".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X