Breaking: ಭಾರತದಲ್ಲಿ 10 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರು

ದೆಹಲಿ, ಜುಲೈ 17: ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹತ್ತು ಲಕ್ಷ ಗಡಿ ದಾಟಿದೆ. ನಿನ್ನೆ ಒಂದೇ ದಿನ 34,956 ಜನರಿಗೆ ಕೊವಿಡ್ ತಗುಲಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10,03,832ಕ್ಕೆ ಏರಿಕೆಯಾಗಿದೆ.

ಈ ಮೂಲಕ ಜಗತ್ತಿನಲ್ಲಿ ಹತ್ತು ಲಕ್ಷ ಕೊರೊನಾ ವೈರಸ್ ಕೇಸ್‌ಗಳನ್ನು ದಾಖಲಿಸಿದ ಮೂರನೇ ದೇಶ ಭಾರತ. ಇದಕ್ಕೂ ಮುಂಚೆ ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ 10 ಲಕ್ಷಕ್ಕೂ ಅಧಿಕ ಕೊವಿಡ್ ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಯಲ್ಲಿ 34,956 ಮಂದಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. 686 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇಂದಿನ ವರದಿ ಬಳಿಕ ದೇಶದಲ್ಲಿ ಈವರೆಗೂ 25,602 ಜನರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಭಾರತದ ಒಟ್ಟು ಪ್ರಕರಣಗಳ ಪೈಕಿ 6,35,757 ಜನರು ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3,42,473 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

COVID19 total cases cross the 10 lakh mark in India

ವರದಿಗಳ ಪ್ರಕಾರ ಭಾರತದಲ್ಲಿ ಇನ್ನು 8,944 ಮಂದಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಇನ್ನುಳಿದಂತೆ ನಿನ್ನೆ ಮಹಾರಾಷ್ಟ್ರದಲ್ಲಿ 8641 ಕೇಸ್ ಪತ್ತೆಯಾಗಿದೆ. ತಮಿಳುನಾಡಿನಲ್ಲಿ 4549 ಕೇಸ್ ಹಾಗೂ ಕರ್ನಾಟಕದಲ್ಲಿ 4169 ಪ್ರಕರಣಗಳು ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+